ಅಕ್ರಮ-ಸಕ್ರಮ ಯೋಜನೆಯನ್ನು ರೂಪಿಸಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿ ಸಾರ್ವಜನಿಕರನ್ನು ತಪ್ಪುದಾರಿಗೆಳೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ದೂರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಮಾಜಿ ಸಚಿವ ರಾಮಲಿಂಗಾರೆಡ್ಡಿಯವರು ಇದು ಬಿಜೆಪಿಯ ಚುನಾವಣಾ ತಂತ್ರವಲ್ಲದೆ ಮತ್ತೇನೂ ಅಲ್ಲ. ಈ ಯೋಜನೆಯನ್ನು ರೂಪಿಸಿದ್ದು ಬಿಜೆಪಿ-ಜೆಡಿಎಸ್ ನೇತೃತ್ವದ ಸರ್ಕಾರವೇ ಹೊರತು ಕಾಂಗ್ರೆಸ್ ಸರ್ಕಾರ ಅಲ್ಲ ಎಂದು ಸ್ಪಷ್ಟಪಡಿಸಿದರು.
2005ರಲ್ಲಿ ತಾವು ಹಾಗೂ ಸಚಿವ ಎಸ್.ಆರ್.ಮೋರೆ ನಗರ ಪ್ರದೇಶಗಳ ಎಲ್ಲ ಸ್ವರೂಪದ ಕಟ್ಟಡಗಳಿಗೆ ಏಕರೂಪದ ಕಾಯ್ದೆಯನ್ನು ಅನುಷ್ಠಾನಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರೂ ಅದು ಕಾರ್ಯರೂಪಕ್ಕೆ ಬರಲಿಲ್ಲ ಎಂದು ಅವರು ವಿವರಣೆ ನೀಡಿದರು.
ಬಿಜೆಪಿ-ಜೆಡಿಎಸ್ ಸರ್ಕಾರವಿದ್ದಾಗಲೂ ಬೇಜವಾಬ್ದಾರಿಯಿಂದ ಆಡಳಿತ ನಡೆಸಿದ ಕಟ್ಟಾ ಸುಬ್ರಮಣ್ಯ ನಾಯ್ಡು ಹಾಗೂ ಆರ್.ಅಶೋಕ್ ಈಗ ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿ ಜನರ ಹಾದಿ ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು
|