ಸಂಪುಟದ ಗಮನಕ್ಕೆ ತಾರದೆಯೇ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಮಾಡಿರುವುದು ರಾಜ್ಯಪಾಲರ ಕೆಂಗಣ್ಣಿಗೆ ಗುರಿಯಾಗಿದೆ. ಕೆಎಂಎಫ್ ಸಂಸ್ಥೆ ಹಾಲಿನ ದರವನ್ನು ಲೀಟರ್ಗೆ ಎರಡು ರೂಪಾಯಿಯಂತೆ ಹೆಚ್ಚಿಸಿದ್ದು ಹಾಲಿನ ಇತರ ಉತ್ಪನ್ನಗಳ ದರವನ್ನು ಹಂತ ಹಂತವಾಗಿ ಏರಿಸಲಾಗುವುದು ಎಂದು ಅದರ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾಗೋಷ್ಠಿಯಲ್ಲಿ ಈ ಹಿಂದೆ ತಿಳಿಸಿದ್ದರು.
ಈಗ ಬೆಲೆ ಏರಿಕೆಗೆ ಸಾರ್ವಜನಿಕರಿಂದ ಹಾಗೂ ಹೈನು ಉತ್ಪನ್ನಗಳನ್ನು ಹೆಚ್ಚಾಗಿ ಅವಲಂಬಿಸಿರುವ ಹೋಟೆಲ್ ಉದ್ಯಮದವರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮ್ಮ ಗಮನಕ್ಕೆ ತಾರದೆ ಸಂಸ್ಥೆ ದರ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕರೆಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
|