ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಪೃಥ್ವಿರಾಜ್ ಚೌವಾಣ್ ಹೇಳಿದ್ದು, ಮಲ್ಲಿಕಾರ್ಜುನ ಖರ್ಗೆ ಅವರೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಸದ್ಯಕ್ಕೆ ಮುಂದುವರಿಯಲಿದ್ದಾರೆ.
ಇದರಿಂದಾಗಿ ಮಹಾರಾಷ್ಟ್ರ ರಾಜ್ಯಪಾಲ ಎಸ್.ಎಂ.ಕೃಷ್ಣ ಅವರು ರಾಜ್ಯ ಕಾಂಗ್ರೆಸ್‌ನ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ದಟ್ಟ ವದಂತಿಗಳಿಗೆ ಸದ್ಯಕ್ಕೆ ತೆರೆಬಿದ್ದಂತಾಗಿದೆ.
ಏತನ್ಮಧ್ಯೆ, ಕಾಂಗ್ರೆಸ್‌ಗೆ ಹೊಸಬರನ್ನು ಸೇರಿಸುವ ಕುರಿತಂತೆ ಅವಸರ ಪಡಬಾರದೆಂದೂ ರಾಜ್ಯ ನಾಯಕರಿಗೆ ಆದೇಶ ನೀಡಿದ್ದಾರೆನ್ನಲಾಗಿದೆ.
"ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಬದಲಾಯಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಅಂತಹ ಚಿಂತನೆ ಸದ್ಯಕ್ಕಿಲ್ಲ. ಪಕ್ಷವನ್ನು ಚುನಾವಣೆಗೆ ಅಣಿಗೊಳಿಸುವುದಕ್ಕೆ ಪ್ರಥಮ ಆದ್ಯತೆ" ಎಂದು ಚೌವಾಣ್ ಪತ್ರಿಕಾಗೋಷ್ಠಿಯಲ್ಲಿ ನುಡಿದರು.
|