ರಾಜ್ಯದಾದ್ಯಂತ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲ ಪಡಿಸಲು ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಜೆಡಿಎಸ್ ಪಕ್ಷದ ಸಮಾವೇಶವನ್ನು ನಡೆಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ.
ಅಧಿಕಾರ ಹಸ್ತಾಂತರ ವಿವಾದದಿಂದ ಕಳೆದು ಹೋಗಿರುವ ವರ್ಚಸ್ಸನ್ನು ಪುನಃ ಪಡೆಯಲು ಅನೇಕ ಯೋಜನೆಗಳನ್ನು ಪ್ರಕಟಿಸಿದ್ದಾರೆ.
ರಾಜ್ಯದ ವಿವಿಧೆಡೆ ಜೆಡಿಎಸ್ ಪಕ್ಷದಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ವಲಸೆ ಹೋಗುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ ಈ ತಿಂಗಳ ಅಂತ್ಯಕ್ಕೆ ರಾಯಚೂರು, ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಪಕ್ಷದ ಬಲವರ್ಧನೆಗೆ ಪ್ರವಾಸ ನಡೆಸಲಾಗುವುದು ಎಂದಿದ್ದಾರೆ.
ಪಕ್ಷದ ಹಿರಿಯ ಮುಖಂಡ ಎಂಪಿ ಪ್ರಕಾಶ್ ನಿರ್ಗಮನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು ಸೂಕ್ತ ಸಂಧರ್ಭದಲ್ಲಿ ಅವರು ನಿರ್ಗಮಿಸಿದ ಕಾರಣಗಳನ್ನು ಬಹಿರಂಗ ಪಡಿಸುತ್ತೇನೆ ಎಂದರು.
ಪಕ್ಷದೊಳಗೆ ಯಾವುದೇ ರೀತಿಯ ಆಂತರಿಕ ಭಿನ್ನಮತ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಕುಮಾರಸ್ವಾಮಿ ಪಕ್ಷದ ವರಿಷ್ಠ ದೇವೇಗೌಡರ ತೀರ್ಮಾನವೇ ಅಂತಿಮ ಎಂದರು.
ಕೆಲ ಮಾಜಿ ಸಚಿವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಇದ್ದ ಅಸಮಧಾನ ಶಮನವಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷ ಒಗ್ಗಟ್ಟಾಗಿ ಎದುರಿಸಲಿದೆ. ಈ ಬಗ್ಗೆ ಯಾವುದೇ ಸಂಶಯಬೇಡ ಎಂದಿದ್ದಾರೆ.
|