ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಚುನಾವಣೆ ನಾಯಕತ್ವ: ಇನ್ನೂ ಅಸ್ಪಷ್ಟ
ರಾಜ್ಯ ಕಾಂಗ್ರೆಸಿನಲ್ಲಿ ನಾಯಕತ್ವದ ವಿಚಾರವು ಹಲವು ಗೊಂದಲಗಳಿಗೆ ಕಾರಣವಾಗಿದೆ. ಮುಂಬರುವ ಚುನಾವಣೆಯನ್ನು ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲೇ ಎದುರಿಸುವುದೋ ಅಥವಾ ಬೇರೊಬ್ಬ ನಾಯಕರು ಬರಲಿದ್ದಾರೋ ಎಂಬ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಕೇಂದ್ರ ಸಚಿವ ಪೃಥ್ವಿರಾಜ್ ಚೌಹಾಣ್ ಇನ್ನೂ ಸ್ಪಷ್ಟವಾಗಿ ತಿಳಿಸಿಲ್ಲ.

ಪಕ್ಷದ ಮಾಜಿ ಶಾಸಕರು, ಮಾಜಿ ಮಂತ್ರಿಗಳು, ಸಂಸತ್ ಸದಸ್ಯರು ಮತ್ತು ಇತರ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚೌಹಾಣ್, ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿದ್ದು ಕೆಪಿಸಿಸಿ ನಾಯಕತ್ವದ ವಿಚಾರವನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದಿದ್ದಾರೆ.

ಚುನಾವಣೆ ಸಲುವಾಗಿ ಹಲವು ಸಮಿತಿಗಳನ್ನು ರಚಿಸಲಾಗುವುದಾದರೂ ಯಾರನ್ನೂ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಬಿಂಬಿಸುವುದಿಲ್ಲ. ಇದಕ್ಕೆ ಬದಲು ಚುನಾವಣೆಯ ನಂತರವೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ಚೌಹಾಣ್ ತಿಳಿಸಿದರು.

ಅಧಿಕಾರಕ್ಕೆ ಬರಲು ಬಿಜೆಪಿ ಏನೆಲ್ಲಾ ಮಾಡಿದೆ ಎನ್ನುವುದು ಜನರಿಗೆ ಗೊತ್ತಾಗಿದೆ. ಹೀಗಿರುವುದರಿಂದ ಅನುಕಂಪದ ಆಧಾರದ ಮೇಲೆ ಅದು ಅಧಿಕಾರಕ್ಕೆ ಬರಲಿದೆ ಎಂಬುದು ಭ್ರಮೆ. ಮುಂಬರಲಿರುವ ಚುನಾವಣೆಯಲ್ಲಿ ಆ ಪಕ್ಷಕ್ಕೆ ಜನರೇ ಪಾಠ ಕಲಿಸಲಿದ್ದಾರೆ ಎಂದು ಚೌಹಾಣ್ ಈ ಸಂದರ್ಭದಲ್ಲಿ ನುಡಿದರು.

ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್, ವಿ.ಮುನಿಯಪ್ಪ, ಉಗ್ರಪ್ಪ, ಸಲೀಂ ಅಹಮದ್ ಸೇರಿದಂತೆ ಇನ್ನೂ ಹಲವು ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಮತ್ತಷ್ಟು
ಆರೋಪ ಬೇಡ, ದೂರು ನೀಡಿ: ಕುಮಾರ ಸವಾಲು
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ; ಎಂ.ವಿ ರಾಜಶೇಖರನ್
ಚಂದ್ರನತ್ತ ಇಸ್ರೋ ನಡೆ
ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಜೆಡಿಎಸ್ ಸಮಾವೇಶ
ಕೆಪಿಸಿಸಿ ಪುನರಚನೆ ಇಲ್ಲ
ಪ್ರಕಾಶ್ ತೊರೆದ ಕಾರಣ ನಾಳೆ ಬಹಿರಂಗ: ಕುಮಾರಸ್ವಾಮಿ