ಬಿಜೆಪಿ, ಜೆಡಿಎಸ್ ಪಕ್ಷಗಳು ನಡೆಸಿದ ರಾಜಕೀಯ ಸರ್ಕಸ್ಸಿನಿಂದ ಯುವ ಜನಾಂಗ ಬೇಸತ್ತಿದೆ. ಇವರಲ್ಲಿ ಉತ್ಸಾಹವನ್ನು ತುಂಬಲು ಪ್ರತಿ ಜಿಲ್ಲೆಯಲ್ಲೂ ರಾಜ್ಯ ಯುವ ಕಾಂಗ್ರೆಸ್ ಸಮಾವೇಶವನ್ನು ಹಮ್ಮಿಕೊಳ್ಳಲಿದೆ ಎಂದು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ರಾಜ್ಯದಾದ್ಯಂತ ಈಗಾಗಲೇ ಹತ್ತು ಲಕ್ಷ ಯುವ ಕಾಂಗ್ರೆಸ್ ಸದಸ್ಯತ್ವದ ನೋಂದಣಿ ಅಭಿಯಾನ ನಡೆಯುತ್ತಿದ್ದು, ಇದು ಮುಗಿದ ನಂತರ ಮತ್ತೆ ಎರಡು ಲಕ್ಷ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ಜಾತ್ಯತೀತ ತತ್ವಗಳಿಗೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷವು ಯುವಕರಲ್ಲಿ ಬದಲಾವಣೆ ತರಲಿದೆ. ಸಾಮಾಜಿಕ ಕಳಕಳಿ ಇರುವ ಪ್ರತಿಭಾವಂತ ಯುವಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡುವಂತೆ ವರಿಷ್ಠರನ್ನು ಒತ್ತಾಯಿಸಲು ತೀರ್ಮಾನಿಸಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಮಾಜಿ ಸಚಿವ ಕೆ.ಬಿ.ಕೋಳಿವಾಡ, ಬಸವರಾಜ ಶಿವಣ್ಣನವರ, ಪ್ರಕಾಶಗೌಡ ಪಾಟೀಲ, ಎನ್.ಮಂಜುನಾಥ, ಪ್ರೊ| ಐ.ಜಿ.ಸನದಿ, ಡಾ|ಸುಧಾಕರ ಮೊದಲಾದವರು ಈ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
|