ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
 
ಸಮ್ಮಿಶ್ರ ಸರ್ಕಾರದ ಹಗರಣಗಳ ತನಿಖೆಯಾಗಲಿ
ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಗಳು ಆಡಳಿತ ನಡೆಸಿದ್ದು ಅವುಗಳ ಅವಧಿಯಲ್ಲಿ ನಡೆದಿರುವ ಹಗರಣಗಳ ಕುರಿತು ಸಿಬಿಐ ತನಿಖೆಯಾಗಬೇಕು ಎಂದು ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಎಸ್ ಬಂಗಾರಪ್ಪ ಒತ್ತಾಯಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್-ಜೆಡಿಎಸ್, ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರಗಳ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆ ಪಕ್ಷಗಳ ಮುಖಂಡರೇ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ತನಿಖೆ ನಡೆಸುವಂತೆಯೂ ಸವಾಲು ಹಾಕುತ್ತಿದ್ದಾರೆ. ಆದ್ದರಿಂದ ಗಣಿ ಲಂಚ, ಸೈಕಲ್ ಖರೀದಿ ಹಗರಣಗಳೇ ಸೇರಿದಂತೆ ಸಮಗ್ರ ಹಗರಣಗಳ ಕುರಿತೂ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಎಂ.ಪಿ.ಪ್ರಕಾಶ್‌ರವರಿಗೆ ಸಮಾಜವಾದಿ ಪಕ್ಷದ ಬಾಗಿಲು ತೆರೆದಿದೆ ಎಂದ ಬಂಗಾರಪ್ಪ, ಈಗಾಗಲೇ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವೆ. ಯಾವ ಪಕ್ಷ ಸೇರಬೇಕು ಎಂಬುದರ ಕುರಿತು ಅವರಿನ್ನೂ ತೀರ್ಮಾನ ಕೈಗೊಂಡಿಲ್ಲವಾದ್ದರಿಂದ ನಿರ್ಧರಿಸಲು ಅವರಿಗೇ ಬಿಟ್ಟಿದ್ದೇನೆ ಎಂದು ನುಡಿದರು.

ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಎಲ್ಲ 224 ಕ್ಷೇತ್ರಗಳಲ್ಲೂ ಸಮಾಜವಾದಿ ಪಕ್ಷ ಸ್ಪರ್ಧಿಸಲಿದೆ ಎಂದು ತಿಳಿಸಿದ ಬಂಗಾರಪ್ಪ, ತಾವು ಯಾವ ಕ್ಷೇತ್ರದಿಂದ ಬೇಕಾದರೂ ಸ್ಪರ್ಧಿಸಲು ಸಿದ್ಧ ಎಂದು ತಿಳಿಸಿದರು.
ಮತ್ತಷ್ಟು
ಜಿಲ್ಲೆ ಜಿಲ್ಲೆಯಲ್ಲೂ ಸಮಾವೇಶ: ಕೃಷ್ಣ ಭೈರೇಗೌಡ
ವಿಶ್ವೇಶ್ವರಯ್ಯ ನಾಲೆ ಒಡೆದು ಫಸಲು ನಷ್ಟ
ಚಳಿಯ ಗಾಯನಕ್ಕೆ ತುಂತುರು ಮಳೆಯ ಪಕ್ಕವಾದ್ಯ
ಜನತಾ ಜನಾರ್ದನರಲ್ಲಿ ನ್ಯಾಯ ಕೇಳುವೆ: ಪುತ್ತಿಗೆ ಶ್ರೀ
ಮುಖ್ಯಮಂತ್ರಿ ಐ ಲವ್ ಯೂ ನಿರ್ಬಂಧಕ್ಕೆ ನಕಾರ
ಕುಮಾರಣ್ಣನ ವಿರುದ್ಧ ದಾವೆ