ಚುನಾವಣೆಗೆ ಹೊರಡುವಾಗಲೇ ಮುಂದಿನ ಸಿ.ಎಂ.ಅಭ್ಯರ್ಥಿ ಯಾರು ಎಂದು ಬಿಂಬಿಸದೆ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಕೇಂದ್ರ ಯೋಜನಾ ಖಾತೆ ಸಚಿವ ಎಂ.ವಿ.ರಾಜಶೇಖರನ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ವಿಷಯದಲ್ಲಿ ಕಾಂಗ್ರೆಸ್ ಅನುಸರಿಸಿಕೊಂಡು ಬಂದಿರುವ ಸಂಪ್ರದಾಯವನ್ನು ಮುರಿಯುವುದಿಲ್ಲ. ಚುನಾವಣೆಯ ನಂತರವೇ ಮುಖ್ಯಮಂತ್ರಿ ಯಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ನುಡಿದರು.
ಮುಂದಿನ ಮುಖ್ಯಮಂತ್ರಿ ಮಲ್ಲಿಕಾರ್ಜುನ ಖರ್ಗೆ ಎಂದು ಸಾರ್ವಜನಿಕ ಸಭೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ ಎಂದ ರಾಜಶೇಖರನ್ ತಾವು ಈ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದರು.
ಹೈದರಾಬಾದ್ ಕರ್ನಾಟಕ ವಲಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371ನೇ ಕಲಂ ತಿದ್ದುಪಡಿ ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಿದೆ. ಪ್ರಧಾನಿಯವರೂ ಈ ಬಗ್ಗೆ ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು.
|