ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಬಿಜೆಪಿ ಚಾಲನೆ
ಮುಂಬರುವ ವಿಧಾನಸಭಾ ಚುನಾವಣೆಗಳಿಗಾಗಿ ಅಭ್ಯರ್ಥಿಗಳನ್ನು ಆಯ್ಕೆಮಾಡುವ ಪ್ರಕ್ರಿಯೆಗೆ ಬಿಜೆಪಿ ಇಂದು ಚಾಲನೆ ನೀಡಲಿದೆ.

ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ ಭಿನ್ನಮತೀಯ ಚಟುವಟಿಕೆಗಳು ಕಾಣಿಸಿಕೊಳ್ಳಬಾರದೆಂಬ ಕಾರಣಕ್ಕಾಗಿ ಪಕ್ಷವು ಈ ನಿರ್ಧಾರಕ್ಕೆ ಬಂದಿದೆ ಎಂದು ಸುದ್ದಿಮೂಲಗಳು ತಿಳಿಸಿವೆ.

ಪ್ರತಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಇಂದಿನಿಂದ ಪಕ್ಷದ ಸಭೆಗಳು ಆರಂಭವಾಗಲಿದ್ದು, ಸಮಗ್ರ ಚರ್ಚೆಯಾದ ನಂತರ ಅಭ್ಯರ್ಥಿಗಳನ್ನು ಅಯ್ಕೆ ಮಾಡಲಾಗುವುದು. ಆಯ್ಕೆಗೆ ಮುನ್ನ ಕಾರ್ಯಕರ್ತರ ಅಭಿಪ್ರಾಯವನ್ನು ಪಡೆಯಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಭಾನುಪ್ರಕಾಶ್ ತಿಳಿಸಿದ್ದಾರೆ.

ಹೊಸ ಮುಖಗಳಿಗೆ ಆದ್ಯತೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಪ್ರಕಟಿಸಿದ್ದು, ಕನಿಷ್ಠ ಆರು ಮಂದಿ ಮಾಜಿ ಶಾಸಕರಿಗೆ ಟಿಕೆಟ್ ಲಭ್ಯವಾಗಲಿದೆ ಎಂದು ತಿಳಿದುಬಂದಿದೆ. ಶೀಘ್ರ ಚುನಾವಣೆಗೆ ಒತ್ತಾಯಿಸುತ್ತಿರುವ ಬಿಜೆಪಿ ಸಾಧ್ಯವಾದಷ್ಟೂ ಬಂಡಾಯ ಅಭ್ಯರ್ಥಿಗಳು ಕಣದಲ್ಲಿರದಂತೆ ನೋಡಿಕೊಳ್ಳುವ ತಂತ್ರವನ್ನು ಅನುಸರಿಸಲಿದೆ ಎಂದು ಸುದ್ದಿಮೂಲಗಳು ತಿಳಿಸಿವೆ.
ಮತ್ತಷ್ಟು
ಅವಹೇಳನಕಾರಿ ಗೀತೆ ವಿರೋಧಿಸಿ ಪ್ರತಿಭಟನೆ
ಕುಮಾರಸ್ವಾಮಿಗೆ ಐಸಿಯುನಿಂದ ಸಾಮಾನ್ಯ ವಾರ್ಡ್
ಪೇಜಾವರರ ವಾದ ಒಪ್ಪಲು ಸಿದ್ದನಿಲ್ಲ: ಪುತ್ತಿಗೆ ಶ್ರೀ
ಸಾರಿಗೆ ಸಂಸ್ಥೆಯ 3 ಬಸ್ಸುಗಳು ಬೆಂಕಿಗಾಹುತಿ
ಯಕ್ಷಗಾನ ಅಕಾಡೆಮಿ ಸ್ಥಾಪನೆಗೆ ಚಾಲನೆ
ಹೊಳೆನರಸೀಪುರದಲ್ಲಿಂದು ಕನಕ ಸಮಾವೇಶ