ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ: ರಾಜಶೇಖರನ್
ಕನ್ನಡಿಗರ ಬಹುದಿನಗಳ ನೀರೀಕ್ಷೆಯಂತೆ ಕನ್ನಡಕ್ಕೆ ಸದ್ಯದಲ್ಲಿಯೇ ಶಾಸ್ತ್ತ್ರೀಯ ಸ್ಥಾನಮಾನ ಸಿಗಲಿದೆ ಎಂದು ಕೇಂದ್ರ ಯೋಜನಾ ಖಾತೆ ರಾಜ್ಯ ಸಚಿವ ಎಂ.ವಿ.ರಾಜಶೇಖರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ನಗರದಲ್ಲಿಂದು ಹಮ್ಮಿಕೊಂಡಿದ್ದ ಕೈಗಾರಿಕಾ ಕನ್ನಡ ಸಂಘಗಳ ರಾಜ್ಯಮಟ್ಟದ ಕನ್ನಡ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕನ್ನಡಿಗರಿಗೆ ಕನ್ನಡ ಸಂಸ್ಕ್ಕತಿಯನ್ನು ಮುನ್ನಡೆಸುವ ಬದ್ಧತೆ ಇದೆ. ಅವರು ನಿರಭಿಮಾನಿಗಳಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಸಚಿವರು ಶಾಸ್ತ್ತ್ರೀಯ ಭಾಷಾ ಸ್ಥಾನಮಾನ ನೀಡುವ ಸಂಬಂಧ ರಾಜ್ಯದ ತಜ್ಞರ ಸಮಿತಿ ಕೇಂದ್ರಕ್ಕೆ ಈಗಾಗಲೇ ವರದಿ ನೀಡಿದೆ. ಸದ್ಯದಲ್ಲಿಯೇ ಕೇಂದ್ರ ಸಂಪುಟ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಾಹಿತಿ ಎಲ್.ಎಸ್.ಶೇಷಗಿರಿರಾವ್, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಲಿಂಗಯ್ಯ, ದೂರದರ್ಶನ ಕೇಂದ್ರದ ನಿರ್ದೇಶಕ ಡಾ.ಮಹೇಶ್ ಜೋಷಿ, ಮಾಜಿ ಸಚಿವ ಶ್ರೀರಾಮುಲು, ಒಕ್ಕೂಟದ ಅಧ್ಯಕ್ಷ ಕೆ.ಪ್ರಭಾಕರ ರೆಡ್ಡಿ ಸೇರಿದಂತೆ ಒಕ್ಕೂಟದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮತ್ತಷ್ಟು
"ಪ್ರೀತಿ ಏಕೆ.ಭೂಮಿ ... ಬಿಡುಗಡೆಗೆ ವಿರೋಧ
ಜೆಡಿಎಸ್ ವಿರುದ್ಧ ಹರಿಹಾಯ್ದ ಯಡಿಯೂರಪ್ಪ
ವೃದ್ಧರಿಗೆ ಮಾಸಿಕ ವೇತನ ಬಿಡುಗಡೆಗೆ ಒತ್ತಾಯ
ಬಡತನ ನಿರ್ಮೂಲನೆಗೆ ಸಹಕಾರ ಅಗತ್ಯ : ರವಿಶಂಕರ್
ಕಳಂಕಿತರಿಗೆ ಬಿಜೆಪಿ ಟಿಕೆಟ್ ಇಲ್ಲ: ಡಿವಿ
ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಬಿಜೆಪಿ ಚಾಲನೆ