ಭವಿಷ್ಯದ ತಮ್ಮ ರಾಜಕೀಯ ನೆಲೆಯ ಕುರಿತು ನಿರ್ಧಾರ ತಳೆಯುವಿಕೆಯನ್ನು ಪದೇ ಪದೇ ಮುಂದೂಡುತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಗೊಂದಲಕ್ಕೆ ಒಳಗಾಗಿದ್ದಾರೆ.
ಅತ್ಯಂತ ಸೂಕ್ಷ್ಮಸಂವೇದಿ ರಾಜಕಾರಣಿ ಎಂದೇ ರಾಜಕೀಯ ವಲಯಗಳಲ್ಲಿ ಬಿಂಬಿತವಾಗಿರುವ ಪ್ರಕಾಶ್ ಈಗಿನ ರಾಜಕೀಯ ಪರಿಸ್ಥಿತಿಯ ಕುರಿತು ಏನೂ ನಿರ್ಧಾರ ತಳೆಯದ ಸ್ಥಿತಿಗೆ ತಲುಪಿದ್ದಾರೆ ಎಂದು ಅವರ ಆಪ್ತ ವಲಯಗಳು ಅಭಿಪ್ರಾಯಪಟ್ಟಿವೆ.
ಆದರೆ, ಯಾವ ಪಕ್ಷ ಸೇರಬೇಕು ಎಂಬುದರ ಕುರಿತು ಅವಸರವಿಲ್ಲ ಎಂದಿರುವ ಪ್ರಕಾಶ್ ಮತ್ತೆ ಜೆಡಿಎಸ್‌ಗೆ ಮರಳುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಎಲ್ಲ ಪಕ್ಷಗಳಲ್ಲೂ ತಮಗೆ ಸ್ನೇಹಿತರಿದ್ದಾರೆ. ಅವರೊಂದಿಗೆ ಮಾತನಾಡಿದ ತಕ್ಷಣ ಆ ಪಕ್ಷ ಸೇರುತ್ತೇನೆಂದು ಅರ್ಥವಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಈ ಮಧ್ಯೆ ಎಂ.ಪಿ.ಪ್ರಕಾಶ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದು ಮಾಜಿ ಶಾಸಕ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ಮುಂದಿನ ರಾಜಕೀಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಕಾಶ್ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
|