ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗ್ರಾಹಕರ ಹಕ್ಕು ಕಾಯ್ದೆ ಆಸ್ಪತ್ರೆಗೂ ವಿಸ್ತರಿಸಲು ಸಲಹೆ
ಸರ್ಕಾರಿ ಆಸ್ಪತ್ರೆಗಳಲ್ಲಿನ ಸೇವೆಯನ್ನು ಗ್ರಾಹಕರ ಹಕ್ಕುಗಳ ಕಾಯ್ದೆಯಡಿಯಲ್ಲಿ ತರಬೇಕಾದ ಅಗತ್ಯವಿದೆ ಎಂದು ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ನ್ಯಾಯಮೂರ್ತಿ ಚಂದ್ರಶೇಖರಯ್ಯ ಪ್ರತಿಪಾದಿಸಿದ್ದಾರೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಯವನಿಕ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ತ್ರೀಯ ಗ್ರಾಹಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ಬೇಜವಾಬ್ದಾರಿತನದಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಹೀಗೆ ಅನ್ಯಾಯಕ್ಕೆ ಒಳಗಾದ ಗ್ರಾಹಕರಿಗೆ ನ್ಯಾಯ ಒದಗಿಸಬೇಕಾದರೆ ಈ ಆಸ್ಪತ್ರೆಗಳನ್ನು ಗ್ರಾಹಕರ ಹಕ್ಕಿನ ಕಾಯ್ದೆಯಡಿ ತರಬೇಕಿದೆ ಎಂದು ಅವರು ಒತ್ತಿ ಹೇಳಿದರು.

ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿಗೆ ಸರ್ಕಾರ ನೀಡುವ ವೇತನ ನಾಗರಿಕರು ವಿವಿಧ ರೀತಿಯ ತೆರಿಗೆ ರೂಪದಲ್ಲಿ ಪಾವತಿಸಿದ ಹಣವಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಗ್ರಾಹಕರ ಹಕ್ಕು ಕಾಯ್ದೆಯನ್ನು ತರುವುದು ಅವಶ್ಯಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನಪರಿಷತ್ ಸಭಾಪತಿ ಪ್ರೊ. ಬಿ.ಕೆ. ಚಂದ್ರಶೇಖರ್, ಸೀಮೆಎಣ್ಣೆಗಾಗಿ ಬೆಳಿಗ್ಗೆಯಿಂದಲೇ ಗ್ರಾಹಕರು ಸರದಿ ಸಾಲಿನಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ. ಇದು ಗ್ರಾಹಕರ ಮನೆಗಳಲ್ಲಿ ನಾನಾ ರೀತಿಯ ಸಮಸ್ಯೆಗಳ ಸೃಷ್ಟಿಗೆ ಕಾರಣವಾಗಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಕುರಿತು ವಿಶೇಷವಾಗಿ ಗಮನ ಹರಿಸಿ ಪರ್ಯಾಯ ವಿತರಣಾ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು ಎಂಬ ಅಭಿಪ್ರಾಯವನ್ನು ತಿಳಿಸಿದರು.

ಇಲಾಖೆಯ ಪ್ರಧಾನ ಕಾರ್ಯದರ್ಶಿ ತಾರಾ ಅಜಯ್ ಸಿಂಗ್ ಮಾತನಾಡಿ, ರಾಜ್ಯದ 500 ಶಾಲೆಗಳಲ್ಲಿರುವ ಗ್ರಾಹಕರ ಹಕ್ಕು ಕ್ಲಬ್ಗಳಿಗೆ ಸರ್ಕಾರದಿಂದ ಅನುದಾನ ಬಂದಿದ್ದು, ಇದರಲ್ಲಿ 300ಕ್ಕೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಇಲಾಖೆಯ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ, ಕಾನೂನು ಮಾಪನ ಶಾಸ್ತ್ತ್ರ ಇಲಾಖೆಯ ನಿಯಂತ್ರಕ ಎನ್. ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.
ಮತ್ತಷ್ಟು
ಸಮ್ಮಿಶ್ರ ಸರ್ಕಾರದಲ್ಲಿ ಹುಳುಕುಗಳೇ ಅಧಿಕ
ಗೊಂದಲದ ಗೂಡಲ್ಲಿ ಎಂ.ಪಿ. ಪ್ರಕಾಶ್ ಬಂದಿ
ಕೋಮುವಾದ ಅಭಿವೃದ್ದಿಗೆ ಮಾರಕ: ಚಂದ್ರಶೇಖರ್
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ: ರಾಜಶೇಖರನ್
"ಪ್ರೀತಿ ಏಕೆ.ಭೂಮಿ ... ಬಿಡುಗಡೆಗೆ ವಿರೋಧ
ಜೆಡಿಎಸ್ ವಿರುದ್ಧ ಹರಿಹಾಯ್ದ ಯಡಿಯೂರಪ್ಪ