ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೃಷಿ, ಶಿಕ್ಷಣ, ಆರೋಗ್ಯಕ್ಕೆ ಆದ್ಯತೆ:ರಾಜಶೇಖರನ್
ಹನ್ನೊಂದನೇ ಪಂಚವಾರ್ಷಿಕ ಯೋಜನೆಯಲ್ಲಿ ಗ್ರಾಮೀಣಾಭಿವೃದ್ಧಿ, ಕೃಷಿ, ಶಿಕ್ಷಣ ಹಾಗೂ ಆರೋಗ್ಯಕ್ಕಾಗಿ ಶೇಕಡ 75ರಷ್ಟು ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಯೋಜನಾ ಖಾತೆ ರಾಜ್ಯ ಸಚಿವ ಎಂ.ವಿ. ರಾಜಶೇಖರನ್ ತಿಳಿಸಿದ್ದಾರೆ.

ರಾಜ್ಯ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯು ರಾಜಾಜಿನಗರದಲ್ಲಿ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

11ನೇ ಪಂಚವಾರ್ಷಿಕ ಯೋಜನೆಯ ಒಟ್ಟು ಮೊತ್ತ 36 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದ ಅಡಿಯಲ್ಲಿ ಈ ಎಲ್ಲ ಕ್ಷೇತ್ರಗಳಿಗೆ ಪ್ರಾಶಸ್ತ್ಯ ನೀಡಲಾಗಿದೆ ಎಂದು ರಾಜಶೇಖರನ್ ಹೇಳಿದರು.

ದೇಶದ 105 ಕೋಟಿ ಜನರಲ್ಲಿ ಯುವಕ ಯುವತಿಯರೇ ಹೆಚ್ಚಿದ್ದು, ಅವರೇ ದೇಶದ ಭವಿಷ್ಯವಾಗಿದ್ದಾರೆ. ಯುವಜನತೆಗೆ ವಿದ್ಯೆ ಮತ್ತು ಆರೋಗ್ಯವೇ ಮುಖ್ಯ ಎಂದು ಅವರು ನುಡಿದರು.

ಈ ಸಂದರ್ಭದಲ್ಲಿ ತುಮಕೂರು ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಹಾಗೂ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಮಾಜಿ ಶಾಸಕರಾದ ವಿ.ಸೋಮಣ್ಣ, ಎಸ್.ಸುರೇಶ್ ಕುಮಾರ್, ನೆ.ಲ. ನರೇಂದ್ರಬಾಬು, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ಸಂಸ್ಥೆಯ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಮೊದಲಾದ ಕಾರ್ಯಕ್ರಮದಲ್ಲಿ ಪ್ರಮುಖರು ಉಪಸ್ಥಿತರಿದ್ದರು.
ಮತ್ತಷ್ಟು
ಗ್ರಾಹಕರ ಹಕ್ಕು ಕಾಯ್ದೆ ಆಸ್ಪತ್ರೆಗೂ ವಿಸ್ತರಿಸಲು ಸಲಹೆ
ಸಮ್ಮಿಶ್ರ ಸರ್ಕಾರದಲ್ಲಿ ಹುಳುಕುಗಳೇ ಅಧಿಕ
ಗೊಂದಲದ ಗೂಡಲ್ಲಿ ಎಂ.ಪಿ. ಪ್ರಕಾಶ್ ಬಂದಿ
ಕೋಮುವಾದ ಅಭಿವೃದ್ದಿಗೆ ಮಾರಕ: ಚಂದ್ರಶೇಖರ್
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ: ರಾಜಶೇಖರನ್
"ಪ್ರೀತಿ ಏಕೆ.ಭೂಮಿ ... ಬಿಡುಗಡೆಗೆ ವಿರೋಧ