ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿಧಾನಸಭೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ
ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷವು 60 ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿದೆ ಎಂದು ಜಾತ್ಯತೀತ ಜನತಾ ದಳದ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ಹೇಳಿದ್ದಾರೆ.

ರಾಜರಾಜೇಶ್ವರಿ ನಗರದ ಬೆಸ್ಟ್ ಕ್ಲಬ್ಬಲ್ಲಿ ಆಯೋಜಿಸಿದ್ದ ಜೆಡಿಎಸ್ ಚಿಂತನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎರಡು ಹಂತಗಳಲ್ಲಿ ಜೆಡಿಎಸ್ ರಾಜ್ಯ ಪ್ರವಾಸ ಕೈಗೊಳ್ಳಲಿದೆ. ಮೊದಲ ಹಂತವು ಜನವರಿ 2 ರಂದು ಮಂಗಳೂರಿನಿಂದ ಪ್ರಾರಂಭಗೊಳ್ಳಲಿದೆ. ನಂತರ ಮುಂಬೈ ಹಾಗೂ ಹೈದರಾಬಾದ್ ಕರ್ನಾಟಕಗಳಲ್ಲಿ ಸಮಾವೇಶಗಳನ್ನು ನಡೆಸಲಾಗುವುದೆಂದು ತೀರ್ಮಾನಿಸಲಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ನಡೆಯುವ ಎರಡನೆ ಹಂತದ ಕಾರ್ಯಕ್ರಮದ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಮಾಜಿ ಶಾಸಕ ಬಾಲಕೃಷ್ಣ ಮಾತನಾಡಿ, ಆತ್ಮಸ್ಥೈರ್ಯವನ್ನು ಕಳೆದುಕೊಳ್ಳದೆ ಮಾಡಿದ ತಪ್ಪನ್ನು ತಿದ್ದಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈಗಿನಿಂದಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರೆ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಹಾಯಕವಾಗುತ್ತದೆ ಎಂದು ಪಾಲಿಕೆಯ ಮಾಜಿ ಸದಸ್ಯ ಆದಿಶೇಷಯ್ಯ ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಶ್ರೀಕಂಠಮೂರ್ತಿ, ಬೆಂಗಳೂರು ನಗರ ಜಿಲ್ಲೆಯ ಜೆಡಿಎಸ್ ಅಧ್ಯಕ್ಷ ಅಂದಾನಪ್ಪ, ಮಾಜಿ ಶಾಸಕರಾದ ಶಿವರಾಜ್, ರಾಜಣ್ಣ, ಮಾಜಿ ಸಂಸದ ನಾರಾಯಣ ಸ್ವಾಮಿ ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮತ್ತಷ್ಟು
ಡಾ. ಪಿ.ಎಸ್. ಶಂಕರ್ ಪ್ರತಿಷ್ಠಾನ ಪ್ರಶಸ್ತಿ ಪ್ರಕಟ
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಕಾರ್ಖಾನೆಗೆ ಬೆಂಕಿ: ಲಕ್ಷಾಂತರ ರೂ. ಹಾನಿ
ಪ್ರಾಧ್ಯಾಪಕ ಶ್ರೀನಿವಾಸರಾಜು ಇನ್ನಿಲ್ಲ
ಗುಜರಾತ್, ಹಿಮಾಚಲ ಮಾದರಿಯಲ್ಲಿ ರಾಜ್ಯ ಬಿಜೆಪಿ
ದರ ಏರಿಕೆ ಹಗಲು ದರೋಡೆಯಲ್ಲ: ಹೊಟೇಲು ಸಂಘ