ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ರಾಜ್ಯದಲ್ಲೂ ಪರಿಣಾಮ ಬೀರಬಹುದೆಂಬ ಬಿಜೆಪಿ ಮಾತು ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದರು.
ಮುಂದಿನ ಚುನಾವಣೆ ಏನಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾತ್ರ. ಜೆಡಿಎಸ್ ಜನರ ಮನದಾಳದಿಂದ ದೂರವಾಗಿದೆ. ಮಾಜಿ ಪ್ರಧಾನಿ ದೇವೆಗೌಡರ ಮಾತನ್ನು ಯಾರೂ ನಂಬುವ ಸ್ಥಿತಿಯಲಿಲ್ಲ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಬಲವಾಗಿದೆ. ಇದನ್ನು ಇನ್ನಷ್ಟು ಬಲಗೊಳಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಕರೆಕೊಟ್ಟ ಅವರು, ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಸಭೆಯ ಸದಸ್ಯ ಪ್ರಕಾಶ್ ರಾಥೋಡ್, ಕಾಂಗ್ರೆಸ್ ಮುಖಂಡ ಕೆಂಚೇಗೌಡ ಮತ್ತಿತರು ಹಾಜರಿದ್ದರು.
|