ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸ್ಪರ್ಧಾತ್ಮಕ ಯುಗದಲ್ಲಿ ಬ್ಯಾಂಕ್‌ಗಳ ಸಾಧನೆ ಗಮನಾರ್ಹ
PTI
ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನದಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ಸಾಧ್ಯ ಎಂದು ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.ಬನ್ನೇರುಘಟ್ಟ ರಸ್ತೆಯಲ್ಲಿರುವ ಸುಂದರರಾಂ ಶೆಟ್ಟಿ ನಗರದಲ್ಲಿ ವಿಜಯಾ ಬ್ಯಾಂಕಿನ ಹೊಸ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಬ್ಯಾಂಕಿಂಗ್ ಕ್ಷೇತ್ರವು ತ್ವರಿತವಾಗಿ ಸ್ಪಂದಿಸಬೇಕಿದೆ. ರಾಷ್ಟ್ರದ ಬ್ಯಾಂಕಿಂಗ್ ವಲಯದ ಪ್ರಗತಿಗೆ ವಿಜಯಾ ಬ್ಯಾಂಕ್ ರಾಷ್ಟ್ರಕ್ಕೆ ಒಂದು ಮಾದರಿಯಾಗಿದೆ ಎಂದು ಅವರು ತಿಳಿಸಿದರು.

ರಾಷ್ಟ್ತ್ರದಲ್ಲಿ ವಿಪುಲವಾಗಿರುವ ಮಾನವ ಸಂಪನ್ಮೂಲವನ್ನು ಕಾಪಾಡುವ ಸಲುವಾಗಿ ಕೇಂದ್ರ ಸರ್ಕಾರವು ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿ ರಾಜ್ಯಗಳಿಗೆ ಅನುದಾನ ನೀಡಿದೆ. ಅದನ್ನು ರಾಜ್ಯಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಿಜಯಾ ಬ್ಯಾಂಕಿನ ಅಧ್ಯಕ್ಷ ಪ್ರಕಾಶ್ ಬಿ. ಮಲ್ಯ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ವಳಿಯಪ್ಪನ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮತ್ತಷ್ಟು
ಮತದಾರರ ಅಂತಿಮ ಪಟ್ಟಿ ವಾರದಲ್ಲಿ ಸಿದ್ದ
ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ: ಪೂಜಾರಿ
ವಿಧಾನಸಭೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ
ಡಾ. ಪಿ.ಎಸ್. ಶಂಕರ್ ಪ್ರತಿಷ್ಠಾನ ಪ್ರಶಸ್ತಿ ಪ್ರಕಟ
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಕಾರ್ಖಾನೆಗೆ ಬೆಂಕಿ: ಲಕ್ಷಾಂತರ ರೂ. ಹಾನಿ