ಹೊಸಪೇಟೆಯ ಮುನಿಸಿಪಲ್ ಮೈದಾನದಲ್ಲಿ ಇಂದು ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಮುನ್ಸಿಪಲ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ನಾಯಕರು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇಂದಿನ ಜನಾಂದೋಲನ ಸಭೆಯನ್ನು ಉದ್ದೇಶಿಸಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಮಾತನಾಡಲಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಕಳೆದುಕೊಂಡ ಬಿಜೆಪಿಯ ಪರಿಸ್ಥಿತಿ ಬೋನಿಗೆ ಬಿದ್ದ ಇಲಿಯಂತಾಗಿದೆ. ಯಾವ ಸಹಾನುಭೂತಿ ತತ್ವದ ಮೇಲೆ ಬಿಜೆಪಿ ಚುನಾವಣೆ ಎದುರಿಸಲು ಸಜ್ಜಾಗುತ್ತಿದೆಯೋ ಅದು ಕೈಗೂಡುವುದಿಲ್ಲ. ಕರ್ನಾಟಕದ ಜನ ಕೋಮುವಾದಿಗಳನ್ನೆಂದೂ ಬೆಂಬಲಿಸುವುದಿಲ್ಲ ಎಂದು ಹೇಳಿದರು.
|