ಜನವರಿ 3ರಂದು ಲಿಂಗಸೂರಿನಲ್ಲಿ ಭಾರತೀಯ ಜನತಾ ಪಕ್ಷವು ರೈತ ಸಮಾವೇಶವನ್ನು ಆಯೋಜಿಸಿದೆ. ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡಿರುವ ಭಾರತೀಯ ಜನತಾ ಪಕ್ಷವು ಹೈದ್ರಾಬಾದ್ ಕರ್ನಾಟಕದಲ್ಲಿ ತನ್ನ ನೆಲೆ ಭದ್ರ ಪಡಿಸಿಕೊಳ್ಳುವ ಯತ್ನದಲ್ಲಿ ಎಂ.ಎಸ್. ಪಾಟೀಲ್‌ರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ.
ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ಭಾರತೀಯ ಜನತಾ ಪಕ್ಷದ ಕಟ್ಟಾ ಸುಬ್ರಹಣ್ಯಂ ನಾಯ್ಡು, ಬಿ. ಶ್ರೀರಾಮುಲು, ಜನಾರ್ಧನ್ ರೆಡ್ಡಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
|