ಬಡ ಕ್ಯಾನ್ಸರ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ಇನ್ನೊಂದು ಯೋಜನೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ವಿಧಾನಸೌಧದಲ್ಲಿ ನಡೆದ ಜನತಾದರ್ಶನದಲ್ಲಿ ಈ ವಿಷಯ ತಿಳಿಸಿದ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರು ಮೂರು ಸೇವಾ ಸಂಘಗಳು ಮತ್ತು ಜಯದೇವ ಹೃದ್ರೋಗ ಆಸ್ಪತ್ರೆ ನಡುವೆ ಮಾಡಿಕೊಂಡ ಒಪ್ಪಂದದ ಪ್ರಕಾರ ಈ ಯೋಜನೆಯನ್ನು ಮುಂದಿನ ತಿಂಗಳು 22ರಿಂದ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಹೃದಯ ಸ್ಪಂದನ ಎಂಬ ನಾಮಕರಣದೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಮುಂಚೆ ಪ್ರಕಟಿಸಲಾದ ಬಡ ಹೃದ್ರೋಗಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆಗೆ ಸಂಬಂಧಪಟ್ಟಂತೆ ಇದುವರೆಗೆ 68 ಅರ್ಜಿಗಳು ಬಂದಿದೆ ಎಂದು ಅವರು ತಿಳಿಸಿದ್ದಾರೆ.
ಕ್ಯಾನ್ಸರ್ ಒಂದು ಮರಣಾಂತಿಕ ರೋಗ. ಬಡಜನರಿಗೆ ಈ ರೋಗದ ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗದ ಕಾರಣ ರಾಜ್ಯ ಸರ್ಕಾರ ಬಡ ಕ್ಯಾನ್ಸರ್ ಪೀಡಿತರಿಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲು ನಿರ್ಧರಿಸಿದೆ ಎಂದು ರಾಜ್ಯಪಾಲರು ಈ ಸಂದರ್ಭದಲ್ಲಿ ತಿಳಿಸಿದರು.
|