ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಖರ್ಗೆ: ಧರಂಸಿಂಗ್
ಮುಂಬರುವ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರೇ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಪುನರುಚ್ಚರಿಸುವ ಮೂಲಕ ಖರ್ಗೆಯವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಚುನಾವಣಾ ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಆಭ್ಯರ್ಥಿಯೇ ಮುಖ್ಯಮಂತ್ರಿಯಾಗಿದ್ದಾರೆ. ಆ ನೀತಿಯನ್ನೆ ಮುಂದುವರಿಸಿಕೊಂಡು ಹೋಗಲಾಗುತ್ತದೆ ಎಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಖರ್ಗೆಯವರೇ ಮುಂದಿನ ಮುಖ್ಯಮಂತ್ರಿ ಎಂಬ ಹೇಳಿಕೆಗೆ ಈಗಲೂ ತಾನು ಬದ್ಧವಾಗಿರುವುದಾಗಿ ಅವರು ಹೇಳಿದರು. ಈ ಹಿಂದೆ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹೇಳಿದ್ದ ಟೀಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಮಹಾರಾಷ್ಟ್ರ ರಾಜ್ಯಪಾಲ ಎಸ್.ಎಂ. ಕೃಷ್ಣ ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು, ಕೃಷ್ಣ ರಾಜಕಾರಣಕ್ಕೆ ಮರಳಿದರೆ ತಮ್ಮ ಸ್ವಾಗತವಿದೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಅವರು ಉತ್ತರಿಸಿದರು.
ಮತ್ತಷ್ಟು
ಕಾಂಗ್ರೆಸ್ ಸೇರಲು ಸೋನಿಯಾ ಜತೆ ಚರ್ಚೆ: ಪ್ರಕಾಶ್
ಚುನಾವಣೆಯಲ್ಲಿ ಕನ್ನಡ ಪರ ಅಭ್ಯರ್ಥಿಗೆ ಮತ
ಬಿಜೆಪಿ ರೈತ ಸಮಾವೇಶಕ್ಕೆ ಭರದ ಸಿದ್ಧತೆ
ಕಗ್ಗಂಟಾದ ಪರ್ಯಾಯ ಪೀಠ ವಿವಾದ
ರೇವಣ್ಣ ಸವಾಲಿಗೆ ಜಿ.ಟಿ. ದೇವೇಗೌಡ ಪ್ರತ್ಯುತ್ತರ
ವರ್ಷದ ವ್ಯಕ್ತಿ ಪ್ರಶಸ್ತಿ ಮಿಗಿಲು: ನಿಸಾರ್ ಅಹಮದ್