ಚುನಾವಣೆಗೆ ಮುನ್ನವೇ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯ ಘೋಷಣೆಯಾಗಲಿದೆ. ಗುಜರಾತ್ ಮಾದರಿಯಲ್ಲಿ ಇಲ್ಲೂ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ಚುನಾವಣೆಗೆ ಮುನ್ನವೇ ಅಗಲಿದೆ ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಇಂದು ರಾಯಚೂರಿನ ಲಿಂಗಸಗೂರಿನಲ್ಲಿ ನಡೆಯಲಿರುವ ಬೃಹತ್ ರೈತ ಸಮಾವೇಶದಲ್ಲಿ ರಾಜನಾಥ್ ಸಿಂಗ್ ಪಾಲ್ಗೊಳ್ಳಲಿದ್ದಾರೆ. ನಿಮ್ಮ ದೃಷ್ಟಿಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ವರದಿಗಾರರ ಪ್ರಶ್ನೆಗೆ ಕಾದು ನೋಡಿ ಎಂದಷ್ಟೇ ಉತ್ತರಿಸಿದರು.
ಗುಜರಾತ್‌ನಲ್ಲಿ ಅನುಸರಿಸಿದ ಚುನಾವಣೆ ತಂತ್ರವನ್ನು ಕರ್ನಾಟಕದಲ್ಲೂ ಬಿಜೆಪಿ ಅನುಸರಿಸಬಹುದೆಂದು ಅಂದಾಜು ಮಾಡಲಾಗಿದೆ. ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಂಚಲನ ಉಂಟುಮಾಡುವರೆಂದು ನಿರೀಕ್ಷಿಸಲಾಗಿದೆ.
|