ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ರಾಜ್ಯದ ಸ್ಥಿತಿಗತಿಗಳ ಬಗ್ಗೆ ರಾಜ್ಯಪಾಲ ರಾಮೇಶ್ವರ ಠಾಕೂರ್‌ರವರ ಜೊತೆ ಚರ್ಚಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಪ್ರವಾಹ ಪರಿಹಾರ ಹಾಗೂ ಅಭಿವೃದ್ದಿ ಕಾರ್ಯಕ್ರಮ ಮುಂತಾದ ವಿಷಯಗಳು ಈ ಚರ್ಚೆಯ ಮುಖ್ಯ ಅಂಶಗಳಾಗಿದ್ದವು ಎಂದು ತಿಳಿದುಬಂದಿದೆ.
ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ ಗೃಹ ಸಚಿವರು ರಾಜಭವನದಲ್ಲಿ ರಾಜ್ಯಪಾಲರು ಹಾಗೂ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿರುವ ಕಾರ್ಯಕ್ರಮಗಳನ್ನು ಮಾರ್ಚ್ ಅಂತ್ಯದೊಳಗೆ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಪ್ರದೇಶಗಳಿಗೆ ಹೆಚ್ಚಿನ ಅನುದಾನ ನೀಡುವುದು ಹಾಗೂ ಇನ್ನಿತರ ಬೇಡಿಕೆಗಳನ್ನು ಗೃಹ ಸಚಿವರ ಮುಂದೆ ಇಡಲಾಯಿತು.
|