ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕುಮಾರಸ್ವಾಮಿ ವಿರುದ್ಧ ವಿಚಾರಣೆಗೆ ಆದೇಶ
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ವೀರಶೈವ ಸಮುದಾಯದ ಭಾವನೆಗಳಿಗೆ ದಕ್ಕೆಯಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದರೆ, ಹೇಳಿಕೆಯ ಕುರಿತು ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಇಲ್ಲಿನ ಸ್ಥಳೀಯ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.

ನ್ಯಾಯವಾದಿ ಎನ್‌.ಪಿ. ಅಮೃತೇಶ ಸಲ್ಲಿಸಿರುವ ದೂರನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯವು ಈ ರೀತಿ ಆದೇಶ ನೀಡಿದೆ. ಅಮೃತೇಶ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಕಳೆದ ನವಂಬರ 29ರಂದು ನಡೆದ ಜೆಡಿಎಸ್‌ನ ಕಾರ್ಯಕಾರಿಣಿ ಸಭೆಯಲ್ಲಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳು ಸೇರಿದಂತೆ ಇತರ ವೀರ ಶೈವ ಮಠಗಳು ರಾಜ್ಯ ರಾಜಕಾರಣದಿಂದ ದೂರ ಇರಬೇಕು ಎಂದು ಹೇಳಿದ್ದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಸಲ್ಲಿಸಿರುವ ದೂರನ್ನು ಸ್ವೀಕರಿಸಿರುವ ಮೆಟ್ರೊಪಾಲಿಟಿನ್ ನ್ಯಾಯಾಧೀಶ ಕೆ. ಪಾಲಾಕ್ಷಪ್ಪ ಅವರು ಕುಮಾರ ಸ್ವಾಮಿ ನೀಡಿರುವ ಹೇಳಿಕೆಯ ವಿರುದ್ಧ ತನಿಖೆ ಕೈಗೆತ್ತಿಕೊಳ್ಳುವಂತೆ ಸೂಚಿಸಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಭಾರತೀಯ ದಂಡ ಸಂಹಿತಾ ಪ್ರಕ್ರಿಯೆ 298 ಮತ್ತು 504ರ ಅನ್ವಯ ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿದೆ. ಬೇರೆ ಜಾತಿಯ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ನೋಯಿಸುವವರ ವಿರುದ್ಧ ಕಲಂ 298ರ ಅನ್ವಯ ಪ್ರಕರಣ ದಾಖಲಿಸಲಾಗುತ್ತದೆ.
ಮತ್ತಷ್ಟು
ರೈತರ ಆತ್ಮಹತ್ಯೆಗೆ ಸರ್ಕಾರವೇ ಹೊಣೆ: ಸಿಂಗ್
ಸಿನಿಮಾ ಕ್ಷೇತ್ರಕ್ಕೆ ಸರ್ಕಾರದ ನೆರವು
ರಾಜ್ಯಕ್ಕೆ ಕೇಂದ್ರ ಚುನಾವಣಾ ಆಯುಕ್ತರು
ಬೆಂಗಳೂರಿನ ಮಾಲತಿ ರಾವ್‌ಗೆ ಕೇಂದ್ರ ಅಕಾಡೆಮಿ ಪ್ರಶಸ್ತಿ
ಸಂಕೇಶ್ವರ, ಕಿಣೇಕರ್ ಬಿಜೆಪಿಗೆ ಸೇರ್ಪಡೆ
ಕಸಾಪ ಅಧ್ಯಕ್ಷ ಚುನಾವಣೆಗೆ ಸಿದ್ಧತೆ