ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯಾದ್ಯಂತ ಜೆಡಿಎಸ್ ಚುನಾವಣಾ ಪ್ರವಾಸ
NEWS ROOM
ರಾಜ್ಯ ಚುನಾವಣೆಗಾಗಿ ಚುನಾವಣಾಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ತೊಡಗಿದ್ದರೆ ಇನ್ನೊಂದೆಡೆ ರಾಜಕಾರಣಿಗಳು ಮತದಾರರನ್ನು ತಮ್ಮೆಡೆಗೆ ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವ ಮೂಲಕ ಜೆಡಿಎಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದೆ.

ಈ ವಿಷಯವನ್ನು ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಜನವರಿ 18ರಂದು ರಾಜ್ಯಾದ್ಯಂತ ಜೆಡಿಎಸ್ ಪ್ರವಾಸ ಕೈಗೊಳ್ಳಲಿದೆ. ಪ್ರವಾಸ ಮೂರು ಹಂತಗಳಲ್ಲಿ ನಡೆಸಲಿದ್ದು, ಮುಳಬಾಗಿಲಿನಿಂದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದೆ ಎಂದು ತಿಳಿಸಿದರು.

ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್ ನೀಡುತ್ತೇವೆಂಬ ಬಿಜೆಪಿ ಮಾತಿಗೆ ತಿರುಗೇಟು ನೀಡಿದ ದೇವೇಗೌಡರು, ಅದು ಎಂದೆಂದಿಗೂ ಅಸಾಧ್ಯದ ಮಾತು. ಬಿಜೆಪಿ ಗುಜರಾತಿನಿಂದ ವಿದ್ಯುತ್ ತರಿಸುತ್ತಾರೆಯೇ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಜೆಡಿಎಸ್ ಸಣ್ಣ ಪಕ್ಷವಾದ್ದರಿಂದ ಅದನ್ನು ಬಲಪಡಿಸಬೇಕಾಗಿದೆ ಎಂದ ಅವರು, ಜೆಡಿಎಸ್ ಅಪ್ಪ ಮಗನ ಪಕ್ಷ ಅಲ್ಲ ಎಂದು ತೋರಿಸಲಿದ್ದೇವೆ. ಚುನಾವಣೆಯಲ್ಲಿ ಪಕ್ಷ ಯಾರೊಂದಿಗೂ ಮೈತ್ರಿ ಮಾಡುವುದಿಲ್ಲ. ಏಕಾಂಗಿಯಾಗಿ ಹೋರಾಡಲಿದ್ದೇವೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಮತ್ತಷ್ಟು
ಕುಮಾರಸ್ವಾಮಿ ವಿರುದ್ಧ ವಿಚಾರಣೆಗೆ ಆದೇಶ
ರೈತರ ಆತ್ಮಹತ್ಯೆಗೆ ಸರ್ಕಾರವೇ ಹೊಣೆ: ಸಿಂಗ್
ಸಿನಿಮಾ ಕ್ಷೇತ್ರಕ್ಕೆ ಸರ್ಕಾರದ ನೆರವು
ರಾಜ್ಯಕ್ಕೆ ಕೇಂದ್ರ ಚುನಾವಣಾ ಆಯುಕ್ತರು
ಬೆಂಗಳೂರಿನ ಮಾಲತಿ ರಾವ್‌ಗೆ ಕೇಂದ್ರ ಅಕಾಡೆಮಿ ಪ್ರಶಸ್ತಿ
ಸಂಕೇಶ್ವರ, ಕಿಣೇಕರ್ ಬಿಜೆಪಿಗೆ ಸೇರ್ಪಡೆ