ಕಬ್ಬು ಬೆಳೆಗೆ ವೈಜ್ಞಾನಿಕ ದರ ನಿಗದಿ ಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್ ಯಶಸ್ವಿಯಾಗಿ ನಡೆಯಿತು. ಬಂದ್ ಬಹುತೇಕ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ರಾಷ್ಟ್ತ್ರೀಯ ಹೆದ್ದಾರಿ ಸೇರಿದಂತೆ ಎಲ್ಲ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸಿನಿಮಾ ಮಂದಿರ, ಹೋಟೆಲ್, ಅಂಗಡಿಗಳನ್ನು ಮುಚ್ಚಲಾಗಿತ್ತು. ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿತ್ತು.
ಸರ್ಕಾರ ಕಬ್ಬಿಗೆ ಬೆಂಬಲ ನೀಡುವಲ್ಲಿ ವಿಫಲವಾಗಿದೆ. ರಾಜ್ಯಪಾಲರಿಗೆ ಹಾಗೂ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದ್ದರೂ, ಕೇವಲ ಭರವಸೆ ನೀಡಿ ನಿರ್ಲಕ್ಷ ಧೋರಣೆಯನ್ನು ತಾಳಿದ್ದಾರೆ ಎಂದು ತಿಳಿದು ಬಂದಿದೆ.
ರೈತರು ಬೆಳೆದಂತಹ ಕಬ್ಬು ಒಣಗುವ ಸ್ಥಿತಿಯಲ್ಲಿದ್ದು, ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಈ ನಡುವೆ ಮೈಶುಗರ್ ಕಾರ್ಖಾನೆಯು ವಾರಕ್ಕೆರಡು ಬಾರಿ ಕಬ್ಬು ಅರೆಯುವುದನ್ನು ನಿಲ್ಲಿಸಲಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕಿಡಾಗಿದ್ದಾರೆ. ಈ ಬಗ್ಗೆ ಸರ್ಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದ ಕಾರಣ ಈ ಬಂದ್‌ಗೆ ಕರೆ ನೀಡಿತ್ತು. ಈ ಬಂದ್‌ಗೆ ಅನೇಕ ಪಕ್ಷಗಳು ಬೆಂಬಲವನ್ನು ನೀಡಿದ್ದವು ಎಂದು ಸುದ್ದಿಮೂಲಗಳು ತಿಳಿಸಿವೆ.
|