ರಾಜ್ಯ ವಿಧಾನಸಭಾ ಚುನಾವಣೆಯು ಕ್ಷೇತ್ರ ಪುನರ್ ವಿಂಗಡಣಾ ಆಯೋಗ ಮಾಡಿರುವ ಶಿಫಾರಸ್ಸಿನ ಅನ್ವಯ ನಡೆಯಲಿದೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಕ್ಷೇತ್ರ ಪುನರ್ ವಿಂಗಡಣಾ ಕಾರ್ಯ ಪೂರ್ಣಗೊಳಿಸಲಾಗಿದೆ. ಈ ಬಗ್ಗೆ ಸದ್ಯದಲ್ಲಿ ಕೇಂದ್ರದಿಂದ ಅನುಮತಿ ದೊರೆಯುವ ಸಾಧ್ಯವಿದೆ. ಆ ರೀತಿಯಂತೆ ಚುನಾವಣೆ ನಡೆಯಲಿದೆ ಎಂದು ಖರ್ಗೆ ತಿಳಿಸಿದರು.
ಈ ಬಗ್ಗೆ ತಾವು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಕುಲದೀಪ್ ಸಿಂಗ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಕ್ಷೇತ್ರ ಪುನರ್ ವಿಂಗಡನೆಯಾಗಿರುವಂತೆ ಚುನಾವಣೆ ಮಾಡಲಾಗುವುದು ಎಂದವರು ಸ್ಪಷ್ಟಪಡಿಸಿದ್ದಾರೆ ಎಂದು ಖರ್ಗೆ ತಿಳಿಸಿದರು.
ಮೇ ತಿಂಗಳ ಒಳಗೆ ರಾಜ್ಯದಲ್ಲಿ ಚುನಾವಣೆ ನಡೆಸಬೇಕಾಗಿದೆ. ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ತಯಾರಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುವುದರಿಂದ ಕ್ಷೇತ್ರ ಪುನರ್ ವಿಂಗಡಣಾ ನೀತಿಯಂತೆ ಚುನಾವಣೆ ನಡೆಸುವುದು ಸೂಕ್ತ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
|