ಮುಂಬರುವ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಯೋಚನೆ ಇಲ್ಲ. ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಯನ್ನೆ ಕಣಕ್ಕಿಳಿಸಲಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಪ್ರವಾಸದ ಭರಾಟೆಯಲ್ಲಿ ಜೆಡಿಎಸ್ ಪಕ್ಷದ ಬಗ್ಗೆ ಜನರು ಮರೆತು ಹೋಗಿರಬಹುದು. ಆದರೆ ಪಕ್ಷ ಇನ್ನು ಜೀವಂತವಾಗಿದೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದು ಅವರು ಸವಾಲು ಹಾಕಿದರು.
ಜೆಡಿಎಸ್ ಪಕ್ಷದ ನಾಯಕರನ್ನು ಸೆಳೆದುಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ. ತಮ್ಮ ಪಕ್ಷದಿಂದ ಹೋಗಲು ಇಚ್ಛಿಸುವವವರು ಆದಷ್ಟು ಬೇಗ ಬಿಡಲಿ. ಕೊನೆಗೆ ಉಳಿಯುವ ನಾಯಕರನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಹೋರಾಡುತ್ತೇವೆ ಎಂದು ಅವರು ತಿಳಿಸಿದರು.
ಉಳಿದ ಪಕ್ಷಗಳಿಂದ ಜೆಡಿಎಸ್ ಪಕ್ಷ ಚಿಕ್ಕದಾಗಿರಬಹುದು. ಈ ಚಿಕ್ಕ ಪಕ್ಷವನ್ನು ಇನ್ನು ಬಲಪಡಿಸಬೇಕಾಗಿದೆ. ಅಲ್ಲದೆ ಜೆಡಿಎಸ್ ಅಪ್ಪ ಮಕ್ಕಳ ಪಕ್ಷ ಅಲ್ಲ ಎಂಬುದನ್ನು ನಾವು ಜನತೆಗೆ ತೋರಿಸಲಿದ್ದೇವೆ ಎಂದು ಅವರು ತಿಳಿಸಿದರು.
|