ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣಾ ಪ್ರಚಾರಕ್ಕೆ ಜೆಡಿಎಸ್ ಸಜ್ಜು
PTI
ರೈತರ ಸಂಪೂರ್ಣ ಸಾಲ ಮನ್ನಾ, ಕೃಷಿಗೆ ಆದ್ಯತೆ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಧನೆಗಳು ಇವೇ ಮುಂತಾದ ವಿಚಾರಗಳನ್ನು ಮುಂದಿಟ್ಟು ಚುನಾವಣೆ ಎದುರಿಸಲು ಜೆಡಿಎಸ್ ಸಜ್ಜಾಗಿದೆ. ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪಕ್ಷದ ಕಾರ್ಯಕರ್ತರಿಗೆ ಚುನಾವಣೆಗೆ ಸಿದ್ಧತೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಕ್ಷೇತ್ರ ಮರು ವಿಂಗಡಣೆ ಕಾರ್ಯ ಭರದಿಂದ ಸಾಗುತ್ತಿದ್ದು, ಮೇ ತಿಂಗಳೊಳಗೆ ಚುನಾವಣೆ ನಡೆಯುವ ಸಾಧ್ಯತೆ ಬಹುತೇಕ ಖಚಿತವಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ರಾಜಕೀಯದಲ್ಲಿ ಕಸರತ್ತು ಪ್ರಾರಂಭಗೊಂಡಿದೆ. ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿರುವ ಬಹುತೇಕ ಪಕ್ಷಗಳು ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸುತ್ತಿವೆ.

ಜೆಡಿಎಸ್ ಈ ತಿಂಗಳ 18ರಿಂದ ಚುನಾವಣಾ ಪ್ರವಾಸವನ್ನು ಪ್ರಾರಂಭಿಸಲಿದ್ದು, ಫೆಬ್ರವರಿ 20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೊನೆಗೊಳ್ಳಲಿದೆ. ಹೃದಯ ಶಸ್ತ್ರಚಿಕಿತ್ಸೆ ನಂತರ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಯಲ್ಲಿ ನಡೆಯುವ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ರಾಜಕೀಯಕ್ಕೆ ಮರಳಲಿದ್ದಾರೆ. ಅಲ್ಲದೆ ಮುಂದಿನ ಚುನಾವಣೆಯ ಸಾರಥ್ಯವನ್ನು ಕುಮಾರಸ್ವಾಮಿ ವಹಿಸಲಿದ್ದಾರೆ.

ಆ ಪ್ರಯುಕ್ತ ಮೊದಲ ಹಂತದ ಚುನಾವಣಾ ಪ್ರಚಾರದಲ್ಲಿ ದೇವೆಗೌಡರ ಜತೆಯಲ್ಲಿ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಾಟೀಲ್ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ವೈ.ಎಸ್.ವಿ. ದತ್ತ ಅವರು ಪಾಲ್ಗೊಳ್ಳದ್ದಾರೆ. ಬಳಿಕ ನಾಲ್ಕು ಹಂತಗಳಲ್ಲಿ ನಡೆಯುವ ಚುನಾವಣಾ ಪ್ರಚಾರವು ಫೆಬ್ರವರಿ 19ಮತ್ತು 20ರಂದು ರಾಷ್ಟ್ರೀಯ ಮಹಾಧಿವೇಶನ ನಡೆಯುವ ಮೂಲಕ ತೆರೆಕಾಣಲಿದೆ. ಬಳಿಕ ಕುಮಾರಸ್ವಾಮಿ ನೇತೃತ್ವದಲ್ಲಿ ಫೆಬ್ರವರಿ 23ರಿಂದ ರಾಜ್ಯ ಪ್ರವಾಸ ಆರಂಭಗೊಳ್ಳಲಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಮತ್ತಷ್ಟು
ರಾಜ್ಯಕ್ಕೆ ಕೇಂದ್ರದ ಕೊಡುಗೆ "ಕತ್ತಲೆ"ಗೆ ಚಾಲನೆ
ರೈಲ್ವೆ ನೇಮಕಾತಿ: ಪ್ರತಿಭಟನೆ ಮುಂದುವರಿಕೆ
ಪರ್ಯಾಯ ವಿವಾದ: ಕೋರ್ಟ್ ವಿಚಾರಣೆ ಇಂದು
ಸಂಗೂರು: ಕಬ್ಬು ಅರೆಯಲು ಸೂಚನೆ, ಬಂದ್ ಹಿಂತೆಗೆತ
ಬ್ರಾಹ್ಮಣರಲ್ಲಿ ಜಾಗೃತಿ ಮೂಡಬೇಕು:ದಿನೇಶ್
ನ್ಯಾಯಾಲಯ ಮೆಟ್ಟಿಲೇರಿದ ವಿವಾದ - ವಿಶ್ವೇಶ ತೀರ್ಥರ ಅಸಮಾಧಾನ