ರೈಲ್ವೆ ಇಲಾಖೆ ನೇಮಕಾತಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟಿಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರಿಗೆ ಮುತ್ತಿಗೆ ಹಾಕಿದರು.
ಟೌನ್ ಹಾಲ್‌ನಲ್ಲಿ ಕರ್ನಾಟಕ ಸವಿತಾ ಕಲಾ ಸಂಘದ ಕಾರ್ಯಕ್ರಮ ಮುಗಿಸಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರು ಹೊರಬರುತ್ತಿದ್ದಂತೆ ರಕ್ಷಣಾ ವೇದಿಕೆ ಕಾರ್ಯಕರ್ತರು ರೈಲ್ವೆ ನೇಮಕಾತಿಯಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗಿದೆ ಮತ್ತು ಬಿಹಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿ ಅವರನ್ನು ಸುತ್ತುವರಿದರು. ಕೂಡಲೇ ಜಾಗೃತರಾದ ಪೊಲೀಸರು ಸಚಿವರಿಗೆ ರಕ್ಷಣೆ ನೀಡಿದರಾದರೂ ಸಚಿವರತ್ತ ಮುನ್ನುಗ್ಗಿದ ಕಾರ್ಯಕರ್ತರು ಈ ಅನ್ಯಾಯಕ್ಕೆ ಸ್ಪಂದಿಸುವಂತೆ ಮತ್ತು ಕನ್ನಡಿಗರಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದರು.
ರಕ್ಷಣಾ ವೇದಿಕೆಯ ಕಾರ್ಯಕರ್ತರ ಬೇಡಿಕೆಗಳನ್ನು ಆಲಿಸಿದ ಸಚಿವರು ಕೂಡಲೇ ಕೇಂದ್ರ ರೈಲ್ವೆ ಸಚಿವ ಲಾಲೂ ಪ್ರಸಾದ್ ಅವರೊಂದಿಗೆ ಈ ಕುರಿತು ಚರ್ಚಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಮನವಿ ಮಾಡುವುದಾಗಿ ತಿಳಿಸಿದರು. ಸಚಿವರು ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
|