ಬಜೆಟ್ ಸಿದ್ಧತಾ ಪ್ರಕ್ರಿಯೆ ಮುಂದಿನ ವಾರದಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಕಾರ್ಯದರ್ಶಿ ಪ್ರಹ್ಲಾದ ಬಿ.ಮಹಿಷಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೊದಲ ಕೇಂದ್ರ ಬಜೆಟ್ ಮಂಡನೆಯಾಗಲಿದೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯಿರುವುದರಿಂದ 2008ರ ಬಜೆಟ್ಟನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಂಡಿಸಲಿದೆ. ಆ ಪ್ರಯುಕ್ತ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಮುಂದಿನ ವಾರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮುಖ್ಯವಾಗಿ ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ, ರಾಜ್ಯದ ಹಣಕಾಸು ಸ್ಥಿತಿಗತಿಗಳ ಬಗ್ಗೆ ಪರೀಶೀಲನೆ ಸೇರಿದಂತೆ ಹಲವು ವಿಷಯಗಳ ಕುರಿತು ಸಚಿವರು ಚರ್ಚೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬಜೆಟ್‌ಗೆ ಅಂತಿಮ ರೂಪ ನೀಡುವ ದೃಷ್ಟಿಯಿಂದ ರಾಜ್ಯಕ್ಕೆ ಆಗಮಿಸಲಿರುವ ಸಚಿವರು ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ರಾಜ್ಯದ ಪರಿಸ್ಥಿತಿಗಳ ಬಗ್ಗೆ ಪರಾಮರ್ಶಿಸಿದ ಬಳಿಕ ಅದಕ್ಕೆ ಬೇಕಾದ ಸೂಕ್ತ ಕ್ರಮಗಳನ್ನು ಬಜೆಟ್ಟಿನಲ್ಲಿ ಪ್ರಕಟಿಸುವ ನೀರೀಕ್ಷೆ ಇದೆ ಎಂದು ತಿಳಿದು ಬಂದಿದೆ.
|