ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮುಖ್ಯ ಚುನಾವಣಾ ಆಯುಕ್ತರ ಮಹತ್ವದ ಭೇಟಿ
ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ರಾಜ್ಯ ರಾಜಕೀಯ ಪಕ್ಷಗಳು ಚುನಾವಣಾ ಆಯೋಗವನ್ನು ಒತ್ತಾಯಪಡಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರ ಭೇಟಿ ಮಹತ್ವದ್ದಾಗಿದೆ.

ಮತದಾರರ ಪಟ್ಟಿಯಲ್ಲಿನ ಲೋಪವನ್ನು ಸರಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ಎನ್. ಗೋಪಾಲಸ್ವಾಮಿ ಮತ್ತು ಇತರ ಇಬ್ಬರು ಆಯುಕ್ತರಾದ ಡಾ.ಎಸ್.ವೈ. ಖುರೇಷಿ ಮತ್ತು ನವೀನ್ ಚಾವ್ಲಾ ಮೂರು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ.

ರಾಜ್ಯದಲ್ಲಿನ ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಅವರು ಚರ್ಚೆ ನಡೆಸಲಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಷಯಗಳು ಈ ಚರ್ಚೆಯಲ್ಲಿ ಬರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಅಲ್ಲದೆ, ನಕಲಿ ಮತದಾರರ ಸಂಖ್ಯೆ ಅಧಿಕವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಎಚ್.ಕೆ. ಪಾಟೀಲ್ ಹಾಗೂ ಇತರರು ಈಗಾಗಲೇ ಆರೋಪಿಸಿದ್ದು, ಮತದಾರರ ಪಟ್ಟಿಯನ್ನು ಪುನರ್ ಪರೀಶೀಲಿಸುವಂತೆ ಆಗ್ರಹಿಸಿದ್ದಾರೆ. ಈ ಎಲ್ಲಾ ವಿಷಯಗಳನ್ನು ಆಯುಕ್ತರು ಪರೀಶೀಲಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ರಾಜ್ಯದಲ್ಲಿನ ಚುನಾವಣಾ ವೀಕ್ಷಕರು ಹಾಗೂ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳ ಜತೆ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ಬೆಂಗಳೂರು ನಗರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆಯಲ್ಲಿಯೂ ಮಾತುಕತೆ ನಡೆಸಲಿದ್ದಾರೆ.

ಈ ಎಲ್ಲಾ ವಿಷಯಗಳನ್ನು ಕೂಲಂಕುಷವಾಗಿ ಪರೀಶೀಲಿಸಿದ ಬಳಿಕ ಆಯುಕ್ತರು ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆಗಳಿವೆ. ಒಂದು ವೇಳೆ ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಅಗತ್ಯವಿಲ್ಲ ಎಂದಾದರೆ, ಚುನಾವಣೆ ದಿನಾಂಕದ ಕುರಿತು ನಿರ್ಧಾರವನ್ನು ಪ್ರಕಟಿಸಬಹುದು. ಇಲ್ಲವಾದರೆ, ಮರು ಪರಿಷ್ಕರಣೆಗೆ ಆದೇಶ ನೀಡುವುದರಲ್ಲಿ ಆಶ್ಚರ್ಯವಿಲ್ಲ. ಏನಿದ್ದರೂ, ಚುನಾವಣೆ ಬಗೆಗಿನ ಗೊಂದಲ ಇನ್ನೆರಡು ದಿನಗಳಲ್ಲಿ ಬಗೆಹರಿಯುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಮತ್ತಷ್ಟು
ಇಂದು ರಾಜ್ಯಕ್ಕೆ ಚು.ಆಯೋಗ ಭೇಟಿ
ಕರವೇ ಪ್ರತಿಭಟನೆ: ಪೊಲೀಸರ ಲಾಠಿ ಪ್ರಹಾರ
ರೈಲ್ವೆ ನೇಮಕಾತಿ ವಿವಾದ: ಆಸ್ಕರ್‌ಗೆ ಮುತ್ತಿಗೆ
ಬಾಲಭವನ ಖಾಸಗೀಕರಣ ಇಲ್ಲ: ಶಾಲಿನಿ ರಜನೀಶ್
ಬಚ್ಚೇಗೌಡ, ನಂಜೆಗೌಡ ಬಿಜೆಪಿಯತ್ತ ಮುಖ
ಇನ್ಫೋಸಿಸ್ ವಾಹನ ಚಾಲಕರ ಪ್ರತಿಭಟನೆ