ಮಾಜಿ ಸಚಿವ ಎಚ್.ಎನ್. ಮಹದೇವ ಪ್ರಸಾದ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಬಾರದೆಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ವರಿಷ್ಠರನ್ನು ಆಗ್ರಹಿಸಿದ್ದಾರೆ.
ಮಹದೇವ್ ಪ್ರಸಾದ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು. ಒಂದು ವೇಳೆ ಸೇರಿಸಿಕೊಂಡರೂ ಟಿಕೆಟ್ ನೀಡಬಾರದು. ಅವರನ್ನು ಸೇರಿಸಿಕೊಳ್ಳುವುದರ ಬಗ್ಗೆ ಸ್ಥಳೀಯ ಮುಖಂಡರ ಸಂಪೂರ್ಣ ವಿರೋಧವಿದೆ ಎಂದು ಗುಂಡ್ಲುಪೇಟೆಯಿಂದ ಆಗಮಿಸಿದ್ದ ಕಾಂಗ್ರೆಸ್ ಮುಖಂಡರಾದ ಎಚ್.ಎಸ್. ನಂಜಪ್ಪ, ಎಸ್.ಪಿ. ಸುರೇಶ್, ಸಿ.ಎಂ. ಶಿವಮಲ್ಲಪ್ಪ, ಪುಟ್ಟರಂಗನಾಯಕ್ ಮೊದಲಾದವರು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ತಿಳಿಸಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಮನವಿ ಪತ್ರ ಸ್ವೀಕರಿಸಿದ ಬಳಿಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಮಹದೇವ್ ಪ್ರಸಾದ್ರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಈವರೆಗೆ ಮಾತುಕತೆ ನಡೆದಿಲ್ಲ. ಅಂತಹ ಸಂದರ್ಭ ಬಂದರೆ ಸ್ಥಳೀಯ ನಾಯಕರ ಅಭಿಪ್ರಾಯ ಪಡೆಯಲಾಗುವುದು ಎಂದು ಭರವಸೆ ನೀಡಿದ ಬಳಿಕ ಮುಖಂಡರು ಹಾಗೂ ಕಾರ್ಯಕರ್ತರು ಧರಣಿಯನ್ನು ಹಿಂತೆಗೆದುಕೊಂಡರು ಎಂದು ತಿಳಿದುಬಂದಿದೆ.
|