ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪೊಲೀಸರು ಮುಕ್ತ ಹಾಗೂ ಶಾಂತಿಯುತವಾದ ವಾತಾವರಣ ನಿರ್ಮಿಸಬೇಕೆಂದು ಕಾನೂನು ಸುವ್ಯವಸ್ಥೆಗೆ ಸಕಲ ನೆರವು ನೀಡಲಿದೆ ಎಂದು ರಾಜ್ಯಪಾಲ ರಾಮೇಶ್ವರ್ ಠಾಕೂರ್ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ.
ಪೊಲೀಸ್ ಮಹಾ ಪ್ರಧಾನ ಕಛೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಬೇಕಾದ ಎಲ್ಲಾ ನೆರವನ್ನು ಸರ್ಕಾರ ನೀಡುವುದಾಗಿ ಭರವಸೆ ನೀಡಿದರು.
ನಗರದಲ್ಲಿ ಸುವ್ಯವಸ್ಥಿತವಾದ ಸಂಚಾರ ವ್ಯವಸ್ಥೆ ನಿರ್ಮಿಸಲು ಸಮಗ್ರವಾದ ಯೋಜನೆಯೊಂದನ್ನು ರೂಪಿಸಿ ಹಂತಹಂತವಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದ ಅವರು, ಇದಕ್ಕೆ ಬೇಕಾದ ಸಂಪೂರ್ಣ ಸಹಕಾರವನ್ನು ಸರ್ಕಾರ ನೀಡಲಿದೆ ಎಂದು ತಿಳಿಸಿದರು.
ಕಳೆದ ಒಂದು ವರ್ಷದಲ್ಲಿ ಕರ್ನಾಟಕ ಪೊಲೀಸರ ಸಾಧನೆ ತೃಪ್ತಿದಾಯಕವಾಗಿದೆ. ಪೊಲೀಸರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುವುದಾಗಿ ಪ್ರಕಟಿಸಿದರು.
|