ರೈಲ್ವೆ ಇಲಾಖೆಯ ನೇಮಕಾತಿಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳನ್ನು ಖಂಡಿಸಿ ಪ್ರವೀಣ್‌ಕುಮಾರ್ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಸಾವಿರಾರು ಕಾರ್ಯಕರ್ತರು ಬೆಂಗಳೂರಿನ ದಂಡು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕುವುದರ ಮೂಲಕ ಪ್ರತಿಭಟನೆ ಸೂಚಿಸಿದರು.
ಪ್ರತಿಭಟನೆಯ ಕಾರಣದಿಂದ ಈ ಪ್ರದೇಶದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪ್ರವೀಣ್‌ಕುಮಾರ್‌ರೊಂದಿಗೆ ವೇದಿಕೆಯ ಶಿವರಾಮೇಗೌಡ, ಲೋಕಸಭಾ ಸದಸ್ಯೆ ತೇಜಸ್ವಿನಿ ಗೌಡ ಮೊದಲಾದವರೂ ಇದ್ದದ್ದು ವಿಶೇಷವಾಗಿತ್ತು. ರೈಲ್ವೇ ಕಚೇರಿಗೆ ನುಗ್ಗಲು ಪ್ರತಿಭಟನೆಕಾರರು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು, ಪ್ರತಿಭಟನೆಯ ನಂತರ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಂಸದೆ ತೇಜಸ್ವಿನಿಯವರು ಮಾತನಾಡುತ್ತಾ, ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಕ್ಕೆ ಸಂಬಂಧಿಸಿ ಪ್ರಧಾನಿ ಮನ್‌ಮೋಹನ್ ಸಿಂಗ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಗಮನ ಸೆಳೆಯುವುದಾಗಿ ತಿಳಿಸಿದರು.
|