ತಮ್ಮ ತೇಜೋವಧೆಗೆ ಯತ್ನಿಸುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಬಸವರಾಜ್ ಪಾಟೀಲ್ ಹುಮ್ನಾಬಾದ್ ಪ್ರಯತ್ನಗಳು ಫಲಕಾರಿಯಾಗುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ತಮ್ಮ ಕ್ಷೇತ್ರದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುವ ವಿಚಾರದಲ್ಲಿ ಸರ್ಕಾರದ ಹಣ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಪಾಟೀಲರ ಆರೋಪ ಹುರುಳಿಲ್ಲದ್ದು ಎಂದು ತಿಳಿಸಿದರು.
ರಾಜಕೀಯ ದುರುದ್ದೇಶದಿಂದ ತುಂಬಿರುವ ಈ ಆರೋಪವನ್ನು ಅವರು ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗುವುದಾಗಿ ಪಟೇಲ್ ಗುಡುಗಿದರು.
ಸದ್ಯದಲ್ಲಿಯೇ ಚುನಾವಣೆಗಳು ಘೋಷಣೆಯಾಗುವುದನ್ನು ಗಮನದಲ್ಲಿಟ್ಟುಕೊಂಡು ಪಾಟೀಲರು ಈ ರೀತಿ ಕೀಳುಮಟ್ಟದ ರಾಜಕೀಯವನ್ನು ಮಾಡುತ್ತಿದ್ದಾರೆ. ಆದರೆ ಕ್ಷೇತ್ರದ ಜನರು ಅವರಿಗೆ ಸರಿಯಾದ ಪಾಠವನ್ನು ಕಲಿಸಲಿದ್ದಾರೆ ಎಂದು ಮೆರಾಜುದ್ದೀನ್ ಪಟೇಲ್ ಈ ಸಂದರ್ಭದಲ್ಲಿ ತಿಳಿಸಿದರು.
|