ಬೆಳಗಾವಿಗೆ ಸಮೀಪದ ಗೋಕಾಕ್ ತರಕಾರಿ ಮಾರುಕಟ್ಟೆಯಲ್ಲಿ ಶುಕ್ರವಾರ ನಸುಕಿನ ಜಾವ ಭೀಕರ ಬೆಂಕಿ ದುರಂತ ಸಂಭವಿಸಿದ್ದು ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಪ್ರಾರಂಭವಾದ ಬೆಂಕಿಯ ಕೆನ್ನಾಲಿಗೆ ಅಕ್ಕ ಪಕ್ಕದ ಇತರ ಮಾರುಕಟ್ಟೆ ಹಾಗೂ ವಾಣಿಜ್ಯ ವಹಿವಾಟು ಕೇಂದ್ರಗಳಿಗೂ ಹಬ್ಬಿತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸ್ವಲ್ಪ ಹೊತ್ತಿಗೆಲ್ಲಾ ಸ್ಥಳಕ್ಕೆ ಅಗ್ನಿಶಾಮಕ ದಳವು ಆಗಮಿಸಿತಾದರೂ ಅಷ್ಟು ಹೊತ್ತಿಗಾಗಲೇ ಕೋಟ್ಯಂತರ ರೂ.ಮೌಲ್ಯದ ನಷ್ಟ ಸಂಭವಿಸಿತ್ತೆಂದು ತಿಳಿದುಬಂದಿದೆ. ಇದು ಕಿಡಿಗೇಡಿಗಳ ಕೃತ್ಯವೇ ಇರಬೇಕೆಂದು ಶಂಕಿಸಲಾಗಿದೆ.
|