ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಕ್ಕಟ್ಟು ನಿವಾರಣೆಗೆ ರಾಜ್ಯ ಪ್ರವಾಸ: ದೇವೇಗೌಡ
NRB
ಪಕ್ಷದಲ್ಲಿ ಉಂಟಾಗಿರುವ ಆಂತರಿಕ ಭಿನ್ನಾಭಿಪ್ರಾಯವನ್ನು ತೊಡೆದುಹಾಕುವ ಉದ್ದೇಶದಿಂದ ತಾವು ಎರಡು ತಿಂಗಳ ಅವಧಿಯ ಪ್ರವಾಸ ಕೈಗೊಂಡಿರುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಇಲ್ಲಿನ ಪ್ರಸಿದ್ಧ ಕುರುಡುಮಲೆ ಗಣಪತಿ ದೇವಾಲಯದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜೆ ಮತ್ತು ಹೋಮ-ಹವನ ಕಾರ್ಯದಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ನೇತೃತ್ವದಲ್ಲಿ ಈಗಾಗಲೇ 9 ಜನರ ಸಮಿತಿಯೊಂದನ್ನು ರಚಿಸಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಎಲ್ಲಾ ಕ್ಷೇತ್ರಗಳ ಟಿಕೆಟ್ ಹಂಚಿಕೆ ಪ್ರಕ್ರಿಯೆಯನ್ನು ಈ ಸಮಿತಿ ನೆರವೇರಿಸುತ್ತದೆ ಎಂದು ಈ ಸಂದರ್ಭದಲ್ಲಿ ದೇವೇಗೌಡರು ತಿಳಿಸಿದರು.

ಪಕ್ಷದ ಸಂಘಟನೆಗಾಗಿ ಶ್ರಮಿಸಿದವರಿಗೆ ಮತ್ತು ಗೆಲ್ಲುವ ಸಾಧ್ಯತೆಗಳಿರುವ ಅಭ್ಯರ್ಥಿಗಳಿಗಷ್ಟೇ ಟಿಕೆಟ್ ನೀಡುವುದಾಗಿ ತಿಳಿಸಿದ ಗೌಡರು, ಈ ಸಂದರ್ಭದಲ್ಲಿ ಜಾತಿ, ವರ್ಗ ಹಾಗೂ ಮೀಸಲಾತಿಯನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಮತ್ತಷ್ಟು
ಬಿಜೆಪಿ ಕಡೆಗೆ ಬೆಂಗಳೂರಿನಲ್ಲಿ ಶರದ್ ಗಾನ
ಹೆಲಿಕಾಪ್ಟರ್ ಭೂಸ್ಪರ್ಶ: ಉದ್ಯಮಿ, 3 ಮಂದಿಗೆ ಗಾಯ
ಪರ್ಯಾಯ ಸಂಪ್ರದಾಯದ ಸಾಗರೋಲ್ಲಂಘನೆ!
ಒಡೆದ ಪೈಪ್: ಅಂಡರ್‌‌ಪಾಸ್ ನಿರ್ಮಾಣಕ್ಕೆ ಅಡ್ಡಿ
ಗೋಕಾಕ್ ಮಾರ್ಕೆಟಿನಲ್ಲಿ ಭೀಕರ ಅಗ್ನಿ ಅನಾಹುತ
ಸಂಪ್ರದಾಯ ಮುರಿದು ಪೀಠವೇರಿದ ಪುತ್ತಿಗೆ ಶ್ರೀ