ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗೌಡರ ಕುತಂತ್ರ ಫಲಿಸದು: ಜಿ.ಟಿ.ದೇವೇಗೌಡ
News RoomNRB
ದೇವೇಗೌಡರ ಮತ್ತು ಅವರ ಕುಟುಂಬದ ಯಾರೇ ತಮ್ಮ ಎದುರು ನಿಂತರೂ ತಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಇಂದು (ಶನಿವಾರ) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಸೋಲಿಸಲೆಂದೇ ದೇವೇಗೌಡರು ಹುಣಸೂರಿಗೆ ಬಂದು ಕಾರ್ಯಕರ್ತರ ಜೊತೆ ಕಾರ್ಯತಂತ್ರ ರೂಪಿಸಿದ್ದಾರೆ. ಆದರೆ ತಮ್ಮ ಕ್ಷೇತ್ರದ ಜನರು ತಮ್ಮನ್ನು ಕೈಬಿಡುವುದಿಲ್ಲ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.

ದೇವೇಗೌಡರ ಕುತಂತ್ರದಿಂದ ಅನೇಕ ಜೆಡಿಎಸ್ ನಾಯಕರು ಪಕ್ಷವನ್ನು ತೊರೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಲ್ಲೆಡೆ ವಾಸ್ತವ್ಯ ಹೂಡಿದ್ದರೂ, ತಮ್ಮ ಕ್ಷೇತ್ರವಾದ ರಾಮನಗರದಲ್ಲಿ ಒಂದು ದಿನವೂ ವಾಸ್ತವ್ಯ ಹೂಡಿಲ್ಲ. ಅಷ್ಟೇ ಏಕೆ, ಲೋಕೋಪಯೋಗಿ ಸಚಿವರಾಗಿದ್ದ ಸಂದರ್ಭದಲ್ಲಿ ರೇವಣ್ಣ ಅವರು ಮಾಡಬೇಕಾದ ಕೆಲಸವನ್ನು ತಾವು ತಮ್ಮ ಕ್ಷೇತ್ರದಲ್ಲಿ ಮೂರು ವರ್ಷಗಳಲ್ಲಿ ಮಾಡಿರುವುದಾಗಿ ಜಿ.ಟಿ. ದೇವೇಗೌಡ ತಿಳಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಇದಕ್ಕೆ ಈಗಿನಿಂದಲೇ ಪಕ್ಷದಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಗುಜರಾತ್, ಹಿಮಾಚಲ ಪ್ರದೇಶದ ಚುನಾವಣೆಯಲ್ಲಿನ ಕಾರ್ಯತಂತ್ರಗಳನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗುವುದು. ಬಡವರಿಗೆ ಬಿಪಿಎಲ್ ಕಾರ್ಡ್ ವಿತರಣೆ, ರೈತರಿಗೆ ಉಚಿತ ವಿದ್ಯುತ್ ನೀಡಿಕೆ ಇವೇ ಮೊದಲಾದ ಯೋಜನೆಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.
ಮತ್ತಷ್ಟು
ದೆಹಲಿಗೆ ಬಿ.ಎಸ್.ಯಡಿಯೂರಪ್ಪ ದೌಡು
ವೀಳ್ಯ ಕೊಟ್ಟು ಸ್ವಾಗತವಿಲ್ಲ: ಸದಾನಂದ ಗೌಡ
ಬಾಲಗಂಗಾಧರರ ಜನ್ಮದಿನಾಚರಣೆ ಸಂಭ್ರಮ
ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ
ಈ ಹಂತಕ 21 ಮಂದಿಯ ಕೊಲೆಗಾರ!
ಷರತ್ತು ವಿಧಿಸದೆ ಪ್ರಕಾಶ್ ಬರಲಿ: ಖರ್ಗೆ