ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವೇಗ ನಿಯಂತ್ರಕ; ಅನಿರ್ಧಿಷ್ಟಾವಧಿ ಲಾರಿ ಮುಷ್ಕರ
ವಾಹನಗಳಿಗೆ ವೇಗ ನಿಯಂತ್ರಕ (ಸ್ಪೀಡ್ ಗವರ್ನರ್)ಗಳ ಅಳವಡಿಕೆಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟವು ಇಂದು(ಭಾನುವಾರ) ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿವರೆಗೆ ಮುಷ್ಕರ ನಡೆಸಲು ತೀರ್ಮಾನಿಸಿದೆ.

ಕೇಂದ್ರ ಸರ್ಕಾರವು ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸಬೇಕೆಂದು ಆದೇಶ ಹೊರಡಿಸಿತ್ತು. ಈ ಬಗ್ಗೆ ಮನವಿ ಸಲ್ಲಿಸಿದ ಬಳಿಕ ಸರಕಾರ ಒಕ್ಕೂಟದ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದ ಕಾರಣ ಮುಷ್ಕರವನ್ನು ವಾಪಸು ಪಡೆಯುವುದೆಂದು ನಿರ್ಧರಿಸಲಾಗಿತ್ತು. ಆದರೆ ವೇಗ ನಿಯಂತ್ರಕ ಅಳವಡಿಕೆ ಆದೇಶದಲ್ಲಿ ಅಗತ್ಯ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗದ ಹಿನ್ನೆಲೆಯಲ್ಲಿ ಅಂತಿಮವಾಗಿ ಮುಷ್ಕರ ನಡೆಸುವುದೆಂದು ತಿರ್ಮಾನಿಸಲಾಗಿದೆ ಎಂದು ಒಕ್ಕೂಟ ತಿಳಿಸಿದೆ.

ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟಗಳ ಜೊತೆಯಲ್ಲಿ ಕರ್ನಾಟಕ ಗೂಡ್ಸ್ ಟ್ರಾನ್ಸ್ಪೋರ್ಟ್ ಮಾಲೀಕರ ಸಂಘ, ಮ್ಯಾಕ್ಸಿ ಕ್ಯಾಬ್ ಮತ್ತು ಬಸ್ ಮಾಲೀಕರ ಸಂಘಗಳು ಈ ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ. ಇದರಿಂದ ಹಾಲು, ತರಕಾರಿ ಮೊದಲಾದ ಮೂಲಭೂತ ಸೌಕರ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಕೇಂದ್ರ ಸರ್ಕಾರವು ದೇಶದ ಎಲ್ಲೆಡೆ ಅನ್ವಯವಾಗುವಂತೆ ಈ ನಿರ್ಧಾರವನ್ನು ಪ್ರಕಟಿಸಲಿ. ಆದರೆ ಯಾವ ರಾಜ್ಯದಲ್ಲೂ ಇಲ್ಲದ ಕಾನೂನು ವ್ಯವಸ್ಥೆ ಕರ್ನಾಟಕದಲ್ಲಿ ಮಾತ್ರ ಜಾರಿಯಲ್ಲಿರುವುದು ಸರಿಯಲ್ಲ ಎಂದು ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಮತ್ತು ಕಾರ್ಯದರ್ಶಿ ಬಿ.ವಿ. ನಾರಾಯಣಪ್ಪ ತಿಳಿಸಿದ್ದಾರೆ.
ಮತ್ತಷ್ಟು
ಬಾಲಗಂಗಾಧರನಾಥ ಸ್ವಾಮೀಜಿ: ಕಲಾಂ ಶ್ಲಾಘನೆ
ಗೌಡರ ಕುತಂತ್ರ ಫಲಿಸದು: ಜಿ.ಟಿ.ದೇವೇಗೌಡ
ದೆಹಲಿಗೆ ಬಿ.ಎಸ್.ಯಡಿಯೂರಪ್ಪ ದೌಡು
ವೀಳ್ಯ ಕೊಟ್ಟು ಸ್ವಾಗತವಿಲ್ಲ: ಸದಾನಂದ ಗೌಡ
ಬಾಲಗಂಗಾಧರರ ಜನ್ಮದಿನಾಚರಣೆ ಸಂಭ್ರಮ
ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ