ನಾನು ಕನ್ನಡನಾಡಿನಲ್ಲಿ ಹುಟ್ಟಬಾರದಿತ್ತು ಎನ್ನುವ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆ ಈಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸ ಒದಗಿಸಿದೆ. ದೇವೇಗೌಡರ ಈ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಗುಲ್ಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡನಾಡಿನಲ್ಲಿ ಹುಟ್ಟಿ ಮುಖ್ಯಮಂತ್ರಿ, ಪ್ರಧಾನಿ ಮೊದಲಾದ ಉನ್ನತ ಹುದ್ದೆಯನ್ನು ಅಲಂಕರಿಸಿರುವ ದೇವೇಗೌಡರು ಕನ್ನಡದ ಬಗ್ಗೆ ಈ ರೀತಿ ಮಾತನಾಡುವುದು ಸರಿಯಲ್ಲ. ಕೂಡಲೇ ಕನ್ನಡಿಗರಲ್ಲಿ ಕ್ಷಮಾಯಾಚಿಸಬೇಕೆಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಖರ್ಗೆ ಮತದಾರರ ಪಟ್ಟಿಯಲ್ಲಿನ ದೋಷಗಳ ಕುರಿತು ಮಾತನಾಡಿ ರಾಜ್ಯದಲ್ಲಿ 40ಲಕ್ಷ ನಕಲಿ ಮತದಾರರು ಪತ್ತೆಯಾಗಿರುವುದರ ಬಗ್ಗೆ ತಕ್ಷಣವೇ ತನಿಖೆಯಾಗಬೇಕೆಂದು ಒತ್ತಾಯಿಸಿದರು.
|