ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ವಿಧಾನಸಭಾ ಚುನಾವಣೆಯ ನೇತೃತ್ವ ವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಚುನಾವಣಾ ರಣಕಹಳೆಗೆ ಬಿಜೆಪಿ ಸಿದ್ದಗೊಂಡಂತಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ನಾಯ್ಡು, ಮಾಜಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಮುಂದಿನ ಚುನಾವಣೆಯ ಸಾರಥ್ಯವನ್ನು ವಹಿಸುವ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದರು.
ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ನುಡಿದ ಅವರು ಈ ಕುರಿತು ತೃತೀಯ ರಂಗದ ಕನಸು ಕೇವಲ ಮರೀಚಿಕೆಯಷ್ಟೇ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಒಂದು ಮುಳುಗುವ ಹಡಗಾಗಿದೆ. ಭಯಕ್ಕೆ ಒಳಗಾಗಿರುವ ಈ ಪಕ್ಷ ರಾಜ್ಯದಲ್ಲಿ ಚುನಾವಣೆಯನ್ನು ಮುಂದೂಡುವ ಪ್ರಯತ್ನವನ್ನು ಮಾಡುತ್ತಿದೆ. ಇದೊಂದು ಪ್ರಜಾತಂತ್ರ ವಿರೋಧಿ ತಂತ್ರವಾಗಿದೆ. ರಾಜ್ಯಪಾಲರು ಯಾವುದೇ ಕಾರಣಕ್ಕಾಗಿ ಚುನಾವಣೆಯನ್ನು ಮುಂದೂಡಬಾರದು ಎಂದು ಅವರು ತಿಳಿಸಿದರು.
|