ಕನ್ನಡ ಪರ ಸಂಘಟನೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕೆಲವು ಕಾರ್ಯಕರ್ತರು ಸಂಸದೆ ತೇಜಸ್ವಿನಿ ಗೌಡರವರ ಸಭೆಗೆ ಅಡ್ಡಿ ಪಡಿಸಿದ ಘಟನೆ ವರದಿಯಾಗಿದೆ.
ರಾಮನಗರದಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ತೇಜಸ್ವಿನಿಯವರು ಭಾಗವಹಿಸಿದ್ದಾಗ ಅಲ್ಲಿಗೆ ಆಗಮಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಕೆಲ ಸದಸ್ಯರು ಅವರ ವಿರುದ್ಧ ಘೋಷಣೆಗಳನ್ನು ಕೂಗಿ ದೊಂಬಿ ಎಬ್ಬಿಸಿದರು ಎಂದು ಸುದ್ದಿಮೂಲಗಳು ತಿಳಿಸಿವೆ.
ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಸದರಿ ಕಾರ್ಯಕರ್ತರನ್ನು ತಮ್ಮ ವಶಕ್ಕೆ ತೆಗೆದುಕೊಂಡರು ಎಂದು ತಿಳಿದುಬಂದಿದೆ.
|