ಇಲ್ಲಿನ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದ ಸ್ಥಳದಲ್ಲಿದ್ದ ನಿರ್ಮಾಣ ಹಂತದ ಗೋಡೆ ಕುಸಿದು ಓರ್ವ ಮಹಿಳೆಗೆ ತೀವ್ರ ಗಾಯವಾಗಿದೆ.
ನಿರ್ಮಾಣ ಹಂತದಲ್ಲಿದ್ದ ಆರ್.ಎನ್.ಶೆಟ್ಟಿ ಒಳಾಂಗಣ ಕ್ರೀಡಾಂಗಣದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಕುಸಿತದಲ್ಲಿ ಮಗುವೊಂದು ಸಿಲುಕಿರಬಹುದು ಎಂಬ ಶಂಕೆಯೂ ಮೂಡಿದೆ. ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣಗೊಂಡಿದೆ.
ವಿಷಯ ತಿಳಿದ ನಂತರ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಘಟನೆಯ ಸ್ಥಳಕ್ಕೆ ಧಾವಿಸಿದ್ದು, ಸದ್ಯಕ್ಕೆ ಜಿಲ್ಲಾಡಳಿತದ ಗಣರಾಜ್ಯೋತ್ಸವ ಸಮಾರಂಭವನ್ನು ರದ್ದುಗೊಳಿಸಲಾಗಿದೆ. ಗಾಯಗೊಂಡವರನ್ನು ಈಗ ಆಸ್ಪತ್ರೆಗೆ ಸೇರಿದಲಾಗಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
|