ಲಾರಿಯೊಂದು ಮಗುಚಿ ಬಿದ್ದ ಪರಿಣಾಮ 10 ಮಂದಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತೋರಣ ಬಳಿ ಸಂಭವಿಸಿದೆ. ಲಾರಿಯಲ್ಲಿ ಸುಮಾರು 40 ಮಂದಿ ಹೋಗುತ್ತಿದ್ದರು ಎಂದು ಹೇಳಲಾಗಿದೆ.
ಆರು ಜನ ಗಂಡಸರು, 3 ಜನ ಹೆಂಗಸರು ಹಾಗು ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದರಲ್ಲಿ ಒಂದೇ ಕುಟುಂಬದ 7 ಜನ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಅವರಲ್ಲಿ ಹೆಚ್ಚಿನವರು ಧಾರವಾಡದ ಎಲ್ಲಮ್ಮನ ಜಾತ್ರೆ ಮುಗಿಸಿಕೊಂಡು ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಈ ಅಪಘಾತದಿಂದ ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತಗೊಂಡಿದ್ದು, ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದಾರೆ.
ಲಾರಿ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ತನಿಖೆ ತೀವ್ರಗೊಳಿಸಲಾಗಿದೆ.
|