ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚುನಾವಣೆಗೆ ಸಜ್ಜಾಗಲು ವೆಂಕಯ್ಯನಾಯ್ಡು ಕರೆ
NRB
ಕೇಂದ್ರ ಸರ್ಕಾರವು ಯಾವುದೇ ಕ್ಷಣದಲ್ಲಿ ಪತನವಾಗುವ ಸಾಧ್ಯತೆ ಇರುವುದರಿಂದ ಮಧ್ಯಂತರ ಚುನಾವಣೆಗೆ ಪಕ್ಷ ಸಜ್ಜಾಗಬೇಕೆಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಯ್ಯನಾಯ್ಡು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಗರದಲ್ಲಿ ಇಂದು (ಬುಧವಾರ) ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿರುವ ಕಮ್ಯೂನಿಸ್ಟ್ ಪಕ್ಷವು ತೃತೀಯ ರಂಗದ ಬಗ್ಗೆ ಸಮಾಲೋಚನೆಯನ್ನು ನಡೆಸುತ್ತಿರುವುದರಿಂದ ಕೇಂದ್ರ ಸರ್ಕಾರವು ಯಾವುದೇ ಕ್ಷಣದಲ್ಲಾದರೂ ಬಹುಮತ ಕಳೆದುಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

ಚುನಾವಣೆಗೆ ಕಾರ್ಯಕರ್ತರನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಪಕ್ಷದ ನಾಯಕ ಹಾಗೂ ಎನ್‌ಡಿಎ ಕೂಟದ ಪ್ರಧಾನಿ ಅಭ್ಯರ್ಥಿ ಎಲ್.ಕೆ. ಅಡ್ವಾಣಿ ಅವರು ಫೆಬ್ರವರಿ ಮೊದಲ ವಾರದಲ್ಲಿ ದಕ್ಷಿಣ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಸಂಸತ್ತು ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವುದನ್ನು ಕುರಿತು ಇತ್ತೀಚೆಗೆ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ ಅವರು, ಶೇ.4ರ ಬಡ್ಡಿದರದಲ್ಲಿ ಸಾಲ ಸೌಲಭ್ಯ, 50 ಸಾವಿರ ರೂ. ವರೆಗಿನ ರೈತರ ಸಾಲ ಮನ್ನಾ, ಭಯೋತ್ಪಾದನೆ ನಿರ್ಮೂಲನೆ ಸೇರಿದಂತೆ ಹಲವು ಅಂಶಗಳು ಮುಂದಿನ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ನೆರವಾಗಲಿವೆ ಎಂದು ತಿಳಿಸಿದರು.
ಮತ್ತಷ್ಟು
ಕಮಲದ ಮಡಿಲಿಗೆ ಇನ್ನೊಂದು ದಳ
ಪ್ರತ್ಯೇಕ ಅಪಘಾತಗಳಲ್ಲಿ 3 ಮಂದಿ ಸಾವು
ಪೇಜಾವರ ಬಗ್ಗೆ ಹೇಳಿಕೆ ನೀಡಿಲ್ಲ: ದತ್ತಾ
ಬೈಕ್ ಬಾಂಬ್ ತಯಾರಿ ನಿಪುಣರು ಈ ಶಂಕಿತ ಉಗ್ರರು
ಜಟಿಲಗೊಂಡ ಹಳ್ಳಿ ಹಕ್ಕಿಯ ಸಮಸ್ಯೆ
ದೇವೇಗೌಡರ ಹೇಳಿಕೆಗೆ ಪೇಜಾವರ ಶ್ರೀಗಳ ಖಂಡನೆ