ಕರ್ನಾಟಕದ ಚುನಾವಣೆಯ ವಿಳಂಬಕ್ಕೆ ಯಾವುದೇ ನೆಪ ನೀಡುವುದನ್ನು ಬಿಜೆಪಿ ವಿರೋಧಿಸಿದ್ದು, ಮೇನಲ್ಲಿ ರಾಷ್ಟ್ರಪತಿ ಆಳ್ವಿಕೆ ಮುಕ್ತಾಯವಾಗುವುದಕ್ಕೆ ಮುಂಚೆ ಚುನಾವಣೆ ನಡೆಸುವಂತೆ ಚುನಾವಣೆ ಆಯೋಗವನ್ನು ಕೋರಿದೆ.
ಹಿರಿಯ ನಾಯಕ ಅರುಣ್ ಜೇಟ್ಲಿ ನೇತೃತ್ವದಲ್ಲಿ ಮುಖ್ಯ ಚುನಾವಣೆ ಆಯುಕ್ತ ಎನ್. ಗೋಪಾಲಸ್ವಾಮಿ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ ಕರ್ನಾಟಕದಲ್ಲಿ ಚುನಾವಣೆ ವಿಳಂಬಕ್ಕೆ ಯಾವುದೇ ಕಾರಣವಿಲ್ಲ ಎಂದು ತಿಳಿಸಿದ್ದಾರೆಂದು ಪಕ್ಷದ ವಕ್ತಾರ ರವಿಶಂಕರ್ ಪ್ರಸಾದ್ ವರದಿಗಾರರಿಗೆ ತಿಳಿಸಿದರು.
ಬಿಜೆಪಿಯ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಅನುಮೋದನೆಯಾದ ನಿರ್ಣಯದಲ್ಲಿ ಕಾಂಗ್ರೆಸ್ ಚುನಾವಣೆ ಮುಂದೂಡಲು ಹೊಸ ನೆಪಗಳನ್ನು ಹುಡುಕಲು ಯತ್ನಿಸುತ್ತಿದೆ ಎಂದು ಹೇಳಿದೆ. ಜೆಡಿಎಸ್ ಪಕ್ಷವು ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಕೂಟದಿಂದ ಹಿಂದೆ ಸರಿದಿದ್ದರಿಂದ ರಾಷ್ಟ್ರಪತಿ ಆಳ್ವಿಕೆಯನ್ನು ಘೋಷಿಸಲಾಗಿತ್ತು.
|