ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆಗಳಲ್ಲಿ ಇಂದು (ಗುರುವಾರ) ಬೆಳಿಗ್ಗೆಯಿಂದಲೇ ವಿವಿಧ ಇಲಾಖೆಯ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ, ಹಣ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ದಾವಣಗೆರೆ, ಮಂಗಳೂರು, ಬೆಂಗಳೂರು, ಗುಲ್ಬರ್ಗಾ ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ತೀವ್ರ ಕಾರ್ಯಾಚರಣೆ ನಡೆಸುತ್ತಿರುವ ಲೋಕಾಯುಕ್ತರು ಇಲಾಖೆ ಅಧಿಕಾರಿಗಳಿಂದ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್, ಸಮಾಜ ಕಲ್ಯಾಣ, ಕೈಗಾರಿಕೆ, ವಾಣಿಜ್ಯ ಸೇರಿದಂತೆ ಹಲವು ಇಲಾಖೆಯ 10 ಅಧಿಕಾರಿಗಳ ಮೇಲೆ ಗುರಿಯಾಗಿಟ್ಟುಕೊಂಡು ಲೋಕಾಯುಕ್ತರು ದಾಳಿ ನಡೆಸಿದ್ದು, ಈ ಕಾರ್ಯಾಚರಣೆ ಸುಮಾರು ಎರಡು ಮೂರು ದಿನಗಳವರೆಗೂ ಮುಂದುವರೆಯುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
|