ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬೆಂಗಳೂರಿನಲ್ಲಿ ರಾಷ್ಟ್ರಪತಿಗೆ ಆತ್ಮೀಯ ಸ್ವಾಗತ
ಮೂರು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಶುಕ್ರವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಆತ್ಮೀಯ ಸ್ವಾಗತ ಕೋರಲಾಯಿತು.

ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಪ್ರತಿಭಾ ಪಾಟೀಲ್ ಅವರನ್ನು ರಾಜ್ಯಪಾಲ ರಾಮೇಶ್ವರ ಠಾಕೂರ್, ಕೇಂದ್ರ ಸಚಿವ ಎಂ.ವಿ. ರಾಜಶೇಖರನ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ರಾಷ್ಟ್ರಪತಿಯವರು ಗೌರವ ವಂದನೆ ಸ್ವೀಕರಿಸಿದ ಬಳಿಕ ರಾಜಭವನಕ್ಕೆ ತೆರಳಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಶನಿವಾರದಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ನಿರ್ಮಿಸಿರುವ ಕನಸಿನ ರೈಲು 'ಸುವರ್ಣ ರಥ'ಕ್ಕೆ ರಾಷ್ಟ್ರಪತಿಯವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಅಲ್ಲದೆ, ಅವರು ಹಂಪಿಗೆ ಭೇಟಿ ನೀಡಲಿದ್ದು ಅಲ್ಲಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ರಾಷ್ಟ್ರಪತಿ ಆಗಮನದಿಂದಾಗಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರಾಜಭವನ ಪರಿಸರದ ಸುತ್ತಮುತ್ತ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಸಂಚಾರ ವ್ಯವಸ್ಥೆಯಲ್ಲಿ ಸ್ವಲ್ಪ ಮಟ್ಟಿನ ತೊಂದರೆ ಕಾಣಿಸಿದೆ ಎಂದು ತಿಳಿದು ಬಂದಿದೆ.
ಮತ್ತಷ್ಟು
ರಾಜ್ಯದ ಸುವರ್ಣ ರಥಕ್ಕೆ ನಾಳೆ ರಾಷ್ಟ್ರಪತಿ ಚಾಲನೆ
ಉಳ್ಳಾಲದಲ್ಲಿ ಉಗ್ರರ ಚಲನವಲನ: ವಿಚಾರಣೆಯಲ್ಲಿ ಬಹಿರಂಗ
14ರಂದು ಚಿತ್ರದುರ್ಗದಲ್ಲಿ ಬಿಜೆಪಿಗೆ ವಲಸೆ ಕಾರ್ಯಕ್ರಮ!
ಕೋರ್ಟಿನಲ್ಲಿ 'ಹಳ್ಳಿ ಹಕ್ಕಿಯ ಹಾಡು' ಪಾಡು
ಕುಬೇರರ ಅಕ್ರಮ ಸಂಪತ್ತು ಬಯಲು
ಶುಕ್ರವಾರ ರಾಜ್ಯಕ್ಕೆ ರಾಷ್ಟ್ರಪತಿ ಆಗಮನ