ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕೇಂದ್ರದ ವೈಫಲ್ಯದಿಂದ ಭಯೋತ್ಪಾದಕರ ಸಂಖ್ಯೆ ಹೆಚ್ಚಳ: ರಾಜನಾಥ್
ದೇಶದ ಭಧ್ರತೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಮೃದು ಧೋರಣೆಯನ್ನು ತಾಳಿದೆ ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.

ಖಾಸಗಿ ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಆಗಮಿಸಿದ್ದ ರಾಜನಾಥ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡುತ್ತ, ದೇಶದಲ್ಲಿನ ಭದ್ರತೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದ್ದು, ಇದರಿಂದ ಭಯೋತ್ಪಾದಕರ ಸಂಖ್ಯೆ ಅಧಿಕವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಚುನಾವಣೆಯ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯಲು ಕಾಂಗ್ರೆಸ್ ಚುನಾವಣೆಯನ್ನು ಮುಂದೂಡುವ ಹುನ್ನಾರ ನಡೆಸುತ್ತಿದೆ ಎಂದು ದೂರಿದರು.

ಗುಜರಾತ್ ಮಾದರಿಯಲ್ಲಿ ರಾಜ್ಯ ಚುನಾವಣೆ ಎದುರಿಸುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ತನ್ನದೇ ಆದ ತಂತ್ರದಿಂದ ರಾಜ್ಯದಲ್ಲಿ ಚುನಾವಣೆ ಎದುರಿಸಲಿದೆ. ಆ ಮೂಲಕ ಜಯಭೇರಿ ಬಾರಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಭೇಟಿಯ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳೊಂದಿಗೆ ಹಾಗೂ ಮುಖಂಡರೊಂದಿಗೆ ಚುನಾವಣೆ ಸಿದ್ದತೆ ಬಗ್ಗೆ ರಾಜನಾಥ್ ಸಿಂಗ್ ಮಾತುಕತೆ ನಡೆಸಿದರು.
ಮತ್ತಷ್ಟು
ಬಿಜೆಪಿ ವಂಚನೆ ಶೀಘ್ರದಲ್ಲೇ ಬಹಿರಂಗಪಡಿಸುವೆ: ಕುಮಾರ
ಗುಲ್ಬರ್ಗದಲ್ಲಿ ಮತ್ತೊಮ್ಮೆ ಲೋಕಾಯುಕ್ತ ದಾಳಿ, ದಾಖಲೆ ವಶ
ಸುವರ್ಣ ರಥಕ್ಕೆ ವಾಟಾಳ್ ತಿರುಗೇಟು - ಎಮ್ಮೆ ರಥ!
ದೇಶೀ ಪ್ರವಾಸೋದ್ಯಮ ಉತ್ತೇಜನ ಅಗತ್ಯ: ರಾಷ್ಟ್ರಪತಿ
ಉಡುಪಿ: ಮೂಡದ ಒಮ್ಮತ, ಕೈಚೆಲ್ಲಿದ ಪೇಜಾವರ ಶ್ರೀ
ರಾಷ್ಟ್ರಪತಿ ಭದ್ರತೆಗಾಗಿ ಕೋತಿಗಳಿಗೆ ಸೆರೆವಾಸ!