ವಿಧಾನಸಭಾ ಚುನಾವಣೆಗೆ ಪೂರ್ವ ತಯಾರಿಯಾಗಿ ಭಾರತೀಯ ಜನತಾ ಪಕ್ಷ ಇಂದು (ಮಂಗಳವಾರ) ಸಂಜೆ ಯಾದಗಿರಿಯಲ್ಲಿ ಬೃಹತ್ ಜನಜಾಗ್ರತಿ ಸಮಾವೇಶವನ್ನು ಆಯೋಜಿಸಿದೆ.
ಕರ್ನಾಟಕದಲ್ಲಿ ಮತ್ತೆ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಆಯೋಜಿಸಿರುವ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವ ನೀರೀಕ್ಷೆಯನ್ನು ಬಿಜೆಪಿ ವ್ಯಕ್ತಪಡಿಸಿದ್ದಾರೆ. ಸಭೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ತ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್‌ಕುಮಾರ್, ರಾಜ್ಯಾಧ್ಯಕ್ಷ ಸದಾನಂದಗೌಡ, ನಾಯಕರಾದ ಜಗದೀಶ್ ಶೆಟ್ಟರ್, ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಜೆಡಿಎಸ್ ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
|